ಕುಶಾಲನಗರ, ಆ.30: ಪೆÇಲೀಸ್ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಉತ್ತಮ ಬಾಂಧವ್ಯ ಮತ್ತು ಜನಸಂಪರ್ಕಗಳಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲೆಯ ಪೆÇಲೀಸರು , ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರ ನಡುವೆ ಕ್ರೀಡೆಗಳನ್ನು ಹಮ್ಮಿಕೊಳ್ಳಲು ಚಿಂತನೆ ಹರಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಎಂಎ ಅಯ್ಯಪ್ಪ ತಿಳಿಸಿದ್ದಾರೆ.
ಅವರು ಕುಶಾಲನಗರದಲ್ಲಿ ಗಣೇಶೋತ್ಸವ ಸಂಬಂಧ ಏರ್ಪಡಿಸಿದ್ದ ತಾಲೂಕು ಮಟ್ಟದ ಪೆÇಲೀಸ್ ಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಜನಸ್ನೇಹಿ ಪೆÇಲೀಸ್ ವ್ಯವಸ್ಥೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಇಲಾಖೆಯೊಂದಿಗೆ ಕೈಜೋಡಿಸಬೇಕಾಗಿದೆ. ಈ ಮೂಲಕ ಅಪರಾಧ ಮುಕ್ತ, ಶಾಂತಿಯುತ ಜಿಲ್ಲೆಯನ್ನಾಗಿಸಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಗಣೇಶ ಪ್ರತಿಷ್ಠಾಪನೆ ಸಂದರ್ಭ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆದಂತೆ ಎಚ್ಚರವಹಿಸುವಂತೆ ಕಿವಿಮಾತು ಹೇಳಿದರು.
ಈ ಸಂದರ್ಭ ಮಾತನಾಡಿದ ಸೋಮವಾರಪೇಟೆ ಉಪ ವಿಭಾಗದ ಪೆÇಲೀಸ್ ಉಪ ಅಧೀಕ್ಷಕ ಆರ್.ವಿ. ಗಂಗಾಧರಪ್ಪ ಅವರು ಗಣೇಶೋತ್ಸವ ಹೆಸರಿನಲ್ಲಿ ಬಲತ್ಕಾರವಾಗಿ ಚಂದಾ ವಸೂಲಿ ಮಾಡುವಂತಿಲ್ಲ, ಒಂದು ವೇಳೆ ಕಂಡುಬಂದಲ್ಲಿ ಅವರ ಮೇಲೆ ಪೆÇಲೀಸ್ ಕಾನೂನು ಪ್ರಕಾರ ದೂರು ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಗಣಪತಿ ಪ್ರತಿಷ್ಠಾಪನೆ ನಂತರ ಅಲ್ಲಿನ ಸಂಪೂರ್ಣ ಜವಾಬ್ದಾರಿಯನ್ನು ಸಮಿತಿಯವರೇ ಹೊರಬೇಕಾಗಿದೆ. ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯಬಾರದು. ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಿದರು. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ರ ತನಕ ಮೈಕ್ ಬಳಸುವಂತಿಲ್ಲ ಎಂದು ಸೂಚಿಸಿದರು. ಈ ಸಂದರ್ಭ ಪೆÇಲೀಸ್ ವೃತ್ತ ನಿರೀಕ್ಷಕ ಮಹೇಶ್, ಠಾಣಾಧಿಕಾರಿಗಳಾದ ಚಂದ್ರಶೇಖರ್, ಅಪ್ಪಾಜಿ ಮತ್ತಿತರರು ಇದ್ದರು.