ಚೆಟ್ಟಳ್ಳಿ, ಆ. 30: ಚೆಟ್ಟಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಕೂಡ್ಲೂರು ಚೆಟ್ಟಳ್ಳಿಯ ಎಸ್ಎಲ್ಎನ್ ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿರುವ ಅಸ್ಸಾಂ ಕೂಲಿ ಕಾರ್ಮಿಕನಿಂದ 4 ಕೆಜಿ ಗಾಂಜಾವನ್ನು ಚೆಟ್ಟಳ್ಳಿ ಪೆÇಲೀಸ್ ಉಪಠಾಣಾ ಹಾಗೂ ಮಡಿಕೇರಿ ಗ್ರಾಮಾಂತರ ಪೆÇಲೀಸ್ ಠಾಣಾ ಅಧಿಕಾರಿ, ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಕಂಡಕರೆ ಬಸ್ ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಸುಳಿವಿನ ಮೇರೆಗೆ ದಾಳಿ ನಡೆಸಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮಕ್ಬೂಲ್ ಅಲಿ ಎಂಬಾತನನ್ನು ಬಂಧಿಸಲಾಗಿದೆ.