ಪೆರಾಜೆ, ಆ. 30: ಮಂಗಳೂರಿನ ಬಾವುಟಗುಡ್ಡೆಯಲ್ಲಿ ಪ್ರತಿಷ್ಠಾಪಿಸಲಿರುವ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ನಾಯಕ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯನ್ನು ಪೆರಾಜೆಗೆ ಭವ್ಯ ಸ್ವಾಗತ ಕೋರÀಲಾಯಿತು.
ಪೆರಾಜೆ ಗ್ರಾಮಕ್ಕೆ ಪ್ರತಿಮೆ ತಲುಪುತ್ತಿದ್ದಂತೆ ಚಂಡೆ ಹಾಗೂ ಸಿಡಿಮದ್ದಿನ ಅಬ್ಬರದೊಂದಿಗೆ ಗ್ರಾಮಸ್ಥರು ಪುಷ್ಪಾರ್ಚನೆ ಮಾಡಿ, ಪೂರ್ಣ ಕುಂಬದಿಂದ, ಅದ್ಧೂರಿಯಾಗಿ ಸ್ವಾಗತಿಸಿದರು.
ಈ ಸಂದರ್ಭ ಪೆರಾಜೆ ಗೌಡ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಯ್ಯ ಕುಂಬಳಚೇರಿ, ಕಾರ್ಯದರ್ಶಿ ಪ್ರವೀಣ್ ಬಂಗಾರಕೋಡಿ, ಮಡಿಕೇರಿ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ ಸೇರಿದಂತೆ ಜನ ಪ್ರತಿನಿಧಿಗಳು, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಸೇರಿದ್ದರು.
ಸಂಪಾಜೆ : ಮಂಗಳೂರಿನ ಬಾವುಟಗುಡ್ಡೆಯಲ್ಲಿ ಅನಾವರಣಗೊಳ್ಳಲಿರುವ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ ಕೆದಂಬಾಡಿ ರಾಮಯ್ಯ ಗೌಡ ಅವರ ಕಂಚಿನ ಪ್ರತಿಮೆಗೆ ಸಂಪಾಜೆ ಗ್ರಾಮದ ಚೆಕ್ ಪೆÇೀಸ್ಟ್ ಬಳಿ ಸ್ವಾಗತಿಸಲಾಯಿತು.