ಮಡಿಕೇರಿ, ಆ. 30: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಹೋಬಳಿ ಘಟಕದ ಉದ್ಘಾಟನೆ ಮತ್ತು ದಿ. ಇರುವೈಲು ರಘುರಾಮ ಅಶ್ರಣ್ಣ ಮತ್ತು ಲೀಲಾ ಅಶ್ರಣ್ಣ ಸ್ಮಾರಕ ದತ್ತಿನಿಧಿ ಹಾಗೂ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ಸೆ. 1 ರಂದು (ನಾಳೆ) ಮಧ್ಯಾಹ್ನ 2 ಗಂಟೆಗೆ ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಪ್ರೌಢಶಾಲೆಯ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ತು ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ನೆರವೇರಿಸಲಿದ್ದಾರೆ.
ನೂತನ ಸಮಿತಿಯ ಪದಾಧಿಕಾರಿಗಳಿಗೆ ಮತ್ತು ಸದಸ್ಯರುಗಳಿಗೆ ಪ್ರಮಾಣ ವಚನವನ್ನು ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಬೋಧಿಸಲಿದ್ದಾರೆ.
ಕೊಡಗಿನ ಆರ್ಥಿಕ, ಸಾಮಾಜಿಕ, ಸಾಂಸ್ಕøತಿಕ ವಿಷಯ ಕುರಿತು ದತ್ತಿ ಉಪನ್ಯಾಸವನ್ನು ಸೋಮವಾರಪೇಟೆ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಎಸ್.ವಿ. ಬಾದಾಮಿ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ ಕುಮಾರಲಿಂಗೇಶ್ವರ ಪ್ರೌಢಶಾಲೆಯ ಅಧ್ಯಕ್ಷ ಕೆ.ಕೆ.ಗೋಪಾಲ್, ಮುಖ್ಯೋಪಾಧ್ಯಾಯ ಶಿವಾನಂದ, ಸೋಮವಾರಪೇಟೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ವಕೀಲ ಬಿ.ಎ. ಜಯೇಂದ್ರ, ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷ ಹೆಚ್.ಆರ್. ಸುರೇಶ್, ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯು.ಬಿ ಜಯಮ್ಮ, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾಕಮ್ಮ, ತೋಳೂರುಶೆಟ್ಟಳ್ಳಿ ಗ್ರಾ.ಪಂ. ಅಧ್ಯಕ್ಷೆ ಭವಾನಿ, ಹೋಬಳಿ ಸಮಿತಿಯ ನಿಯೋಜಿತ ಅಧ್ಯಕ್ಷ ಸಿ.ಎಸ್. ನಾಗರಾಜ್, ಗೌರವ ಕಾರ್ಯದರ್ಶಿ ಕೆ.ಯು. ಜಗದೀಶ್ ಮತ್ತು ಸಿ.ಹೆಚ್. ಸುರೇಖಾ, ಗೌರವ ಕೋಶಾಧಿಕಾರಿ ಎ.ಎಸ್ ಸುರೇಶ್ ಭಾಗವಹಿಸಲಿದ್ದಾರೆ ಎಂದು ಸೋಮವಾರಪೇಟೆ ತಾಲೂಕು ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ತಿಳಿಸಿದ್ದಾರೆ.
ವೀರಾಜಪೇಟೆಯ ಡಾ. ದುರ್ಗಾ ಪ್ರಸಾದ್ ಮತ್ತು ವಕೀಲ ಐ.ಆರ್. ಪ್ರಮೋದ್ ಈ ದತ್ತಿಯ ದಾನಿಗಳಾಗಿರುತ್ತಾರೆ ಎಂದು ತಿಳಿಸಿದ್ದಾರೆ.
ಪ್ರಾಸ್ತಾವಿಕವಾಗಿ ಕಸಾಪ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಲಿದ್ದಾರೆ.