ಮಡಿಕೇರಿ, ಆ. 30: ಸೆ. 2 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸುವವರಿದ್ದು, ಸದರಿ ದಿನ ಮಂಗಳೂರಿನಲ್ಲಿ ನಡೆಯುವ ಪ್ರಧಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರನ್ನು ಕರೆತರುವ ಸಲುವಾಗಿ ಮಡಿಕೇರಿ ಘಟಕದಿಂದ 60 ಬಸ್‍ಗಳನ್ನು ನಿಯೋಜಿಸಬೇಕಾಗಿರುತ್ತದೆ. ಇದರಿಂದ ಈ ದಿನದಂದು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಯಾಗುತ್ತಿರುವ ನಿಗಮದ ಸಾರಿಗೆಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿರುತ್ತದೆ. ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸಬೇಕಾಗಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಬಿ. ಜಯಕರ ಶೆಟ್ಟಿ ಕೋರಿದ್ದಾರೆ.