ಮಡಿಕೇರಿ, ಆ. 30: ಸತತ ಸಾಧನೆ, ಪರಿಶ್ರಮದಿಂದ ಉತ್ತಮ ಕ್ರೀಡಾಪಟುಗಳಾಗಿ ರೂಪುಗೊಳ್ಳಲು ಸಾಧ್ಯ ಎಂದು ರಾಷ್ಟ್ರೀಯ ಕ್ರೀಡಾ ಪಟು ಮತ್ತು ರಾಷ್ಟ್ರೀಯ ತರಬೇತು ದಾರ ಅಂತೋನಿ ಡಿಸೋಜ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ವತಿಯಿಂದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಹುಟ್ಟು ಹಬ್ಬದ ಪ್ರಯುಕ್ತ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇತ್ತೀಚೆಗೆ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಅನೇಕ ಪದಕಗಳು ದೇಶಕ್ಕೆ ಬಂದಿವೆ. ಇನ್ನು ಮುಂದೆ ಬರುವ ಕ್ರೀಡಾಕೂಟದಲ್ಲಿ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಾಧನೆ ಮಾಡುವಂತಾಗಬೇಕು. ತಮ್ಮ ಗುರಿಯನ್ನು ಮುಟ್ಟಲು ದಿನನಿತ್ಯ ಪರಿಶ್ರಮ ಪಡಬೇಕು. ಯಾವ ಹಂತದಲ್ಲೂ ಕುಗ್ಗದೆ ಕ್ರೀಡಾ ಚಟುವಟಿಕೆಯಲ್ಲಿ ಮುನ್ನಡೆಯಬೇಕು.
ನಾವು ಜಾಗತಿಕವಾಗಿ ಜನಸಂಖ್ಯೆಯಲ್ಲಿ ಮುಂಚೂಣಿಗೆ ಬರುತ್ತಿದ್ದೇವೆ. ಹಾಗೆಯೇ ಕ್ರೀಡಾ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರಬೇಕು ಎಂದರು. ಕೊಡಗಿನಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಧನೆ ಮಾಡಿದ ಮಾಡುವಂತಾಗಬೇಕು. ತಮ್ಮ ಗುರಿಯನ್ನು ಮುಟ್ಟಲು ದಿನನಿತ್ಯ ಪರಿಶ್ರಮ ಪಡಬೇಕು. ಯಾವ ಹಂತದಲ್ಲೂ ಕುಗ್ಗದೆ ಕ್ರೀಡಾ ಚಟುವಟಿಕೆಯಲ್ಲಿ ಮುನ್ನಡೆಯಬೇಕು.
ನಾವು ಜಾಗತಿಕವಾಗಿ ಜನಸಂಖ್ಯೆಯಲ್ಲಿ ಮುಂಚೂಣಿಗೆ ಬರುತ್ತಿದ್ದೇವೆ. ಹಾಗೆಯೇ ಕ್ರೀಡಾ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರಬೇಕು ಎಂದರು. ಕೊಡಗಿನಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಧನೆ ಮಾಡಿದ ಇಲಾಖೆಯ ಸಹಾಯಕ ನಿರ್ದೇಶಕÀ ಜಿ.ಎಸ್. ಗುರುಸ್ವಾಮಿ, ಹಾಕಿಯಲ್ಲಿ ಮೇಜರ್ ಧ್ಯಾನ್ ಚಂದ್ ಅವರು ದೇಶಕ್ಕೆ ಉತ್ತಮವಾದ ಕೊಡುಗೆ ನೀಡಿದ್ದಾರೆ. ಅವರ ಜೀವನಾದರ್ಶ ಗಳನ್ನು ಯುವಕ-ಯುವತಿಯರು ಮೈಗೂಡಿಸಿ ಕೊಳ್ಳಬೇಕು. ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡುವಂತಾಗಬೇಕು ಎಂದರು.
ರಾಷ್ಟ್ರೀಯ ಕ್ರೀಡಾಪಟು ಮತ್ತು ಕ್ರೀಡಾ ತರಬೇತುದಾರರಾದ ಅಂತೋನಿ ಡಿಸೋಜ, ಕೆ.ಕೆ.ಬಿಂದ್ಯಾ ಮತ್ತು ಸುಬ್ಬಯ್ಯ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನಡೆದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಅಧೀಕ್ಷಕರಾದ ಕೃಷ್ಣೋಜಿ, ಇತರರು ಇದ್ದರು.