ತಾ. ೫ ರವರೆಗೆ ಶ್ರೀಗಳು ಪೊಲೀಸರ ವಶಕ್ಕೆ
ಚಿತ್ರದುರ್ಗ, ಸೆ. ೨: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ ೫ ರವರೆಗೆ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಶ್ರೀಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾದ ಆರು ದಿನಗಳ ನಂತರ ನಿನ್ನೆ ರಾತ್ರಿ ೧೦ ಗಂಟೆಯ ಸುಮಾರಿಗೆ ಚಿತ್ರದುರ್ಗ ಪೊಲೀಸರು ಅವರನ್ನು ಬಂಧಿಸಿದ್ದರು. ಇಂದು ಆರೋಪಿ ಶ್ರೀಗಳನ್ನು ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿ ಶ್ರೀಗಳನ್ನು ವಿಚಾರಣೆಗಾಗಿ ಐದು ದಿನ ತಮ್ಮ ವಶಕ್ಕೆ ನೀಡಬೇಕು ಎಂದು ಪೊಲೀಸರು ಮನವಿ ಮಾಡಿದರು. ಆದರೆ ಕೋರ್ಟ್ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ಇಂದು ಬೆಳಿಗ್ಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಸತತ ೨ ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಿದ ಮೂವರು ವೈದ್ಯರ ತಂಡ. ಚೆಸ್ಟ್ ಸ್ಕಾö್ಯನ್, ಇಸಿಜಿ, ಎಕೊ, ಎಂಆರ್ಐ ಸ್ಕಾö್ಯನ್ ಹೀಗೆ ಹಲವು ಪರೀಕ್ಷೆಗಳನ್ನು ನಡೆಸಿದರು. ಶ್ರೀಗಳು ಎದೆನೋವು ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯ ಸೂಕ್ಷö್ಮ ಪರಿಸ್ಥಿತಿಯಲ್ಲಿರುವುದರಿಂದ ಅವರನ್ನು ಜಿಲ್ಲಾಸ್ಪತ್ರೆಯ ಐಸಿಯುಗೆ ಶಿಫ್ಟ್ ಮಾಡಲಾಗಿತ್ತು.
ಮಂಗಳೂರಿನಲ್ಲಿ ಮೋದಿ
ಮಂಗಳೂರು, ಸೆ. ೨: ಮೂಲಸೌಕರ್ಯಗಳ ಸುಧಾರಣೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ೩.೮೦೦ ಕೋಟಿ ರೂಪಾಯಿ ಮೊತ್ತದ ಹೊಸ ಯೋಜನೆಯೊಂದಿಗೆ ನವ ಮಂಗಳೂರು ಬಂದರನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ವಿಶ್ವ ದರ್ಜೆ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ಹಾಗೂ ಕರಾವಳಿ ಭಾಗದಲ್ಲಿ ಅತ್ಯುತ್ತಮ ರೀತಿಯಲ್ಲಿ ಬಂದರುಗಳ ಸಂಪರ್ಕತೆ ಹೊಂದಲು ಸರ್ಕಾರ ಒತ್ತು ನೀಡುತ್ತಿದೆ ಎಂದರು. ಗೋಲ್ಡನ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ರೂ. ೩,೮೦೦ ಕೋಟಿ ಮೊತ್ತದ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, ಜನರ ಜೀವನಮಟ್ಟ ಸುಧಾರಿಸಲು ಹಾಗೂ ದೇಶದ ಆರ್ಥಿಕ ಪ್ರಗತಿಯನ್ನು ಸಾಧಿಸಲು ಡಬಲ್ ಎಂಜಿನ್ ಸರ್ಕಾರ ನೆರವಾಗುತ್ತಿದೆ. ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಹೊಸ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಅವರು ಹೇಳಿದರು. ಐತಿಹಾಸಿಕ ಮಂಗಳೂರು ಬಂದರನ್ನು ಮೇಲ್ದರ್ಜೇಗೇರಿಸಲಾಗುವುದು, ಇದರೊಂದಿಗೆ ಮೀನುಗಾರರ ಬದುಕು ಕೂಡಾ ಸುಧಾರಿಸಲಿದೆ. ಒಂದು ಜಿಲ್ಲೆ, ಒಂದು ಉತ್ಪನ್ನ ಯೋಜನೆಯಡಿ, ಮೀನುಗಾರರು ತಮ್ಮ ಮೀನುಗಳನ್ನು ಅಂರ್ರಾಷ್ಟಿçÃಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು ಎಂದರು. ಉತ್ಪಾದನಾ ಕ್ಷೇತ್ರ ವಿಸ್ತರಣೆಯ ಅಗತ್ಯವಿದೆ ಎಂದು ಹೇಳಿದ ಪ್ರಧಾನಿ, ಸರಿಯಾದ ವ್ಯವಸ್ಥೆ ಇಲ್ಲದೆ ನಮ್ಮ ಉತ್ಪನ್ನಗಳು, ಸ್ಪರ್ಧೆ, ಆಮದು ಹೆಚ್ಚಾಗಲು ಸಾಧ್ಯವಿಲ್ಲ, ಕಳೆದ ೮ ವರ್ಷಗಳಲ್ಲಿ ದೇಶದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸಾಗರಮಾಲಾ ಯೋಜನೆಯಿಂದ ಕರಾವಳಿಯಲ್ಲಿ ಮೂಲಸೌಕರ್ಯವನ್ನು ಬಲಗೊಳಿಸಲಾಗುತ್ತಿದೆ. ಸರಕಾರದ ಪ್ರಯತ್ನದಿಂದ ಕಳೆದ ೮ ವರ್ಷಗಳಲ್ಲಿ ಮಂಗಳೂರು ಬಂದರಿನಲ್ಲಿ ವ್ಯಾಪಾರ ಚಟುವಟಿಕೆಗಳು ದ್ವಿಗುಣಗೊಂಡಿದೆ ಎಂದರು.