ಸೋಮವಾರಪೇಟೆ, ಸೆ. ೨: ಕಾರ್ಮಿಕರು ಸರ್ಕಾರದ ವತಿಯಿಂದ ಲಭ್ಯವಿರುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದೆ ಬರಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಎಂ.ಎಸ್.ವೀರೇAದ್ರ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿ ಕಾರ್ಯೋನ್ಮುಖವಾಗಿದೆ ಎಂದರು.

ಕಟ್ಟಡ ಕಾರ್ಮಿಕರ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ, ಶ್ರಮ ಸಾಮರ್ಥ್ಯ, ಕಾರ್ಮಿಕ ಗೃಹ ಭಾಗ್ಯ, ಹೆರಿಗೆ ಸೌಲಭ್ಯ, ಶಿಶುಪಾಲನಾ ಸೌಲಭ್ಯ, ವೈದ್ಯಕೀಯ ಮತ್ತು ಶೈಕ್ಷಣಿಕ ಸಹಾಯಧನ, ಅಪಘಾತ ಪರಿಹಾರ ಮತ್ತಿತರ ಸೌಲಭ್ಯಗಳು ಇದೆ. ಇನ್ನೂ ಹೆಸರು ನೋಂದಾಯಿಸಿಕೊಳ್ಳದ ಕಾರ್ಮಿಕರು ತಕ್ಷಣವೇ ನೋಂದಣಿ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ನೋಂದಾಯಿತ ಕಟ್ಟಡ ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿ ಕಾರ್ಮಿಕರು ಹಾಗೂ ಕಾರ್ಮಿಕ ಇಲಾಖೆಗೆ ಸೇತುವೆಯಾಗಿ ಸಮಿತಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ನೋಂದಾಯಿತ ಸದಸ್ಯರು ಸಂಘದ ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದ ಅವರು, ಈಗಾಗಲೇ ಜಿಲ್ಲೆಯಾದ್ಯಂತ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು,ಆದೇಶ ಪತ್ರಗಳನ್ನು ನೀಡಲಾಗಿದೆ ಎಂದರು.

ಗೋಷ್ಠಿಯಲ್ಲಿ ಸಂಘದ ರಾಜ್ಯ ನಿರ್ದೇಶಕ ಕೆ.ಎನ್. ಹೂವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ. ಯತೀಶ್, ತಾಲೂಕು ಅಧ್ಯಕ್ಷರುಗಳಾದ ಕುಮಾರ್ ಪಾಪಣ್ಣ, ಹರೀಶ್ ಪೆರಾಜೆ ಮತ್ತಿತರರು ಇದ್ದರು.