ಮಡಿಕೇರಿ, ಸೆ. ೧: ಮನೆ ಮನೆ ಕಾವ್ಯ ಗೋಷ್ಠಿ ಪರಿಷತ್ತು ಮತ್ತು ಕಾವೇರಿ ಗಣೇಶೋತ್ಸವ ಸಮಿತಿ, ಮೂರ್ನಾಡು ರಸ್ತೆ ವೀರಾಜಪೇಟೆ ಇವರ ಸಹಯೋಗದೊಂದಿಗೆ ತಾ. ೪ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ವೀರಾಜಪೇಟೆಯ ಮೂರ್ನಾಡು ರಸ್ತೆಯ ಶ್ರೀ ಕಾವೇರಿ ಗಣೇಶೋತ್ಸವ ಸಮಿತಿಯ ವೇದಿಕೆಯಲ್ಲಿ ಮನೆ ಮನೆ ಕಾವ್ಯಗೋಷ್ಠಿಯನ್ನು ಏರ್ಪಡಿಸಲಾಗಿದೆ.

ಈ ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿ-ಕವಯತ್ರಿಯರು ೮೮೬೧೪೦೫೭೩೮ ಅನ್ನು ಸಂಪರ್ಕಿಸಲು ಕೋರಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೇಶವ ಕಾಮತ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜೇಶ್ ಪದ್ಮನಾಭ, ಕಾವೇರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರಾಜಪ್ಪ ಪೊನ್ನಪ್ಪ ನಂಬುಡುಮಾಡ ಹಾಗೂ ಇನ್ನಿತರರು ಭಾಗವಹಿಸಲಿದ್ದಾರೆ.