ಮಡಿಕೇರಿ, ಸೆ.೧ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ತಾ. ೫ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್, ಶಾಸಕರು ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ಎಂ.ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪಿ.ಕೆ.ಶ್ರೀನಿವಾಸ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್ ಇತರರು ಪಾಲ್ಗೊಳ್ಳಲಿದ್ದಾರೆ.