ಪೊನ್ನಂಪೇಟೆ, ಸೆ. ೨: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಿಸಲಾಯಿತು. ಈ ಸಂದರ್ಭ ಪ್ರಭಾರ ಪ್ರಾಂಶುಪಾಲೆ ಪ್ರೊ. ಎಂ.ಎಸ್. ಭಾರತಿ ವಿದ್ಯಾರ್ಥಿಗಳಿಗೆ ಸದ್ಭಾವನ ದಿನದ ಪ್ರತಿಜ್ಞಾವಿಧಿ ಬೋಧಿಸಿ, ಮಾತನಾಡಿ ಜಾತಿ, ಧರ್ಮ, ಭಾಷೆ, ಮತ, ಪ್ರದೇಶದ ಭೇದಭಾವವಿಲ್ಲದೆ ನಾವೆಲ್ಲರೂ ಭಾರತೀಯರು ಎಂಬ ಭಾವನೆಯಿಂದ ಬಾಳ್ವೆ ನಡೆಸುವ ಮೂಲಕ ಸದೃಢ ಭಾರತ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಅಧಿಕಾರಿಗಳಾದ ಎಂ.ಎನ್. ವನಿತ್ ಕುಮಾರ್, ಎನ್.ಪಿ. ರೀತಾ, ಉಪನ್ಯಾಸಕರು, ಆಡಳಿತಾತ್ಮಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.