ಸಿದ್ದಾಪುರ, ಸೆ. ೨: ನೆಲ್ಲಿಹುದಿಕೇರಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಎ.ಕೆ. ಹಕೀಂ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಸಾಬು ವರ್ಗೀಸ್ ಅವರು ಕಳೆದ ಒಂದು ತಿಂಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು.
ಈ ಹಿಂದೆ ಅಧ್ಯಕ್ಷರ ಚುನಾವಣೆಯ ಸಂದರ್ಭ ಇವರಿಬ್ಬರು ಪರಸ್ಪರ ಒಳ ಒಪ್ಪಂದ ಮಾಡಿಕೊಂಡಿದ್ದರು. ಇದೀಗ ಎರಡನೇ ಅವಧಿಗೆ ನಡೆದ ಅಧ್ಯಕ್ಷರ ಸ್ಥಾನ ಚುನಾವಣೆಯಲ್ಲಿ ಎ.ಕೆ. ಹಕೀಂ ರವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಚುನಾವಣಾಧಿಕಾರಿ ಆಗಿ ತೋಟಗಾರಿಕಾ ಇಲಾಖೆಯ ಅಧಿಕಾರಿ ವರದರಾಜು ಅವರು ಕಾರ್ಯನಿರ್ವಹಿಸಿದರು. ಈ ಸಂದರ್ಭ ಪಿಡಿಓ ಅನಿಲ್‌ಕುಮಾರ್ ಹಾಗೂ ಗ್ರಾ.ಪಂ. ಸದಸ್ಯರುಗಳು ಹಾಜರಿದ್ದರು.