ಕೂಡಿಗೆ, ಸೆ. ೪: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಗ್ರಾಮದಲ್ಲಿ ಮಳೆಯಿಂದಾಗಿ ಕುಮಾರ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ.

ಸ್ಥಳಕ್ಕೆ ಕುಶಾಲನಗರ ಕಂದಾಯ ಇಲಾಖೆಯ ಉಪ ತಹಶಿಲ್ದಾರ ಮಧುಸೂದನ್, ನಿರೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಿದರು.