ಮಡಿಕೇರಿ, ಸೆ. ೫: ಎಎನ್‌ಎಂ ಶುಶ್ರೂಷಕಿಯರ ತರಬೇತಿಯ ಪ್ರಮಾಣ ಪತ್ರಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾನ್ಯತೆ ನೀಡಿ ಉದ್ಯೋಗ ಒದಗಿಸ ಬೇಕೆಂದು ಒತ್ತಾಯಿಸಿ ಕೊಡಗು ಎಎನ್‌ಎಂ ಅಸೋಸಿಯೇಷನ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಶುಶ್ರೂಷಕಿಯರು ಬೇಡಿಕೆಯ ಈಡೇರಿಕೆಗಾಗಿ ಆಗ್ರಹಿಸಿದರು.

ಅಸೋಸಿಯೇಷನ್ ಅಧ್ಯಕ್ಷೆ ಭಾಗ್ಯಶ್ರೀ ಮಾತನಾಡಿ, ಎಎನ್‌ಎಂ ಶುಶ್ರೂಷಕಿಯರಾಗಿ ತರಬೇತಿ ಪಡೆದವರ ಪ್ರಮಾಣ ಪತ್ರಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮಾನ್ಯತೆ ನೀಡುತ್ತಿಲ್ಲ. ಇದರಿಂದ ತರಬೇತಿ ಪಡೆದವರು ಉದ್ಯೋಗ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಸ್ತುತ ತರಬೇತಿ ಪಡೆಯುತ್ತಿರುವವರು ಗೊಂದಲಕ್ಕೀಡಾಗಿದ್ದು, ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸಾಕಷ್ಟು ಮಂದಿ ಸಾಲ ಮಾಡಿ ಎಎನ್‌ಎಂ ಶುಶ್ರೂಷಕಿಯರ ತರಬೇತಿ ಪಡೆದುಕೊಂಡಿದ್ದಾರೆ. ಆದರೆ ಇವರ ಶಿಕ್ಷಣಕ್ಕೆ ಮಾನ್ಯತೆ ಇಲ್ಲದಾಗಿದೆ, ಈಗಾಗಲೇ ತರಬೇತಿ ಪಡೆದಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಅಧಿಕೃತ ಮುದ್ರೆ ಇರುವ ಪ್ರಮಾಣ ಪತ್ರ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉದ್ಯೋಗ ನೀಡುವಂತೆ ಒತ್ತಾಯಿಸಿದರು.

ಎಎನ್‌ಎಂ ಶುಶ್ರೂಷಕಿಯರ ತರಬೇತಿ ನೀಡುವ ಸಂಸ್ಥೆಗಳಿಗೆ ಸರ್ಕಾರದ ಮಾನ್ಯತೆ ಪಡೆದು ತರಬೇತಿ ನೀಡುವಂತೆ ಸ್ಪಷ್ಟ ಆದೇಶ ವನ್ನು ನೀಡಬೇಕು. ಇಲ್ಲವಾದಲ್ಲಿ ತರಬೇತಿ ಪಡೆದ ಶುಶ್ರೂಷಕಿಯರು ಯಾವುದೇ ಕೆಲಸವಿಲ್ಲದೆ ತೊಂದರೆಗೆ ಸಿಲುಕುತ್ತಾರೆ ಎಂದು ಪ್ರತಿಭಟನಾ ಕಾರರು ತಮ್ಮ ಅಳಲು ತೋಡಿ ಕೊಂಡರು. ಸರ್ಕಾರ ಮತ್ತು ಆರೋಗ್ಯ ಇಲಾಖೆ ಸ್ಪಂದನ ನೀಡದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ ಹಾಗೂ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಎಎನ್‌ಎಂ ವಿದ್ಯಾರ್ಥಿ ಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿ ದ್ದರು. ಬೇಡಿಕೆಯ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಆರೋಗ್ಯಾಧಿಕಾರಿಗಳ ಗಮನ ಸೆಳೆದು ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸ್ಪಂದಿಸದ ಡಿಹೆಚ್‌ಒ

ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಸ್ಥಳಕ್ಕೆ ಬಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೆಂಕಟೇಶ್ ಅವರನ್ನು ಭೇಟಿಯಾಗಿ ಬೇಡಿಕೆಯ ಕುರಿತು ಗಮನ ಸೆಳೆದರೂ ಯಾವುದೇ ಸ್ಪಂದನ ನೀಡಿಲ್ಲ. ಇದಕ್ಕೂ ನಮಗೂ ಸಂಬAಧವಿಲ್ಲ, ಸಂಬAಧಪಟ್ಟ ಅಧಿಕಾರಿಗಳ ಗಮನಕ್ಕೆ ತನ್ನಿ, ಈ ಬೇಡಿಕೆ ಬಗ್ಗೆ ನನಗೆ ತಿಳಿದೇ ಇಲ್ಲವೆಂದು ನಿರ್ಲಕ್ಷö್ಯ ತೋರಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಹಿಂದೆ ಪ್ರತಿಭಟನೆ ನಡೆಸಿದಾಗ ಆರೋಗ್ಯಾ ಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ, ಅಲ್ಲದೆ ಪತ್ರಿಕೆಗಳ ಮೂಲಕ ಗಮನ ಸೆಳೆಯಲಾಗಿದೆ. ಆದರೆ ಈಗ ನನಗೆ ಏನು ತಿಳಿದಿಲ್ಲವೆಂದು ಹೇಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.