ತಹಶೀಲ್ದಾರ್ ಆಗಿ ನರಗುಂದ ಅಧಿಕಾರ ಸ್ವೀಕಾರ
ಸೋಮವಾರಪೇಟೆ, ಸೆ.೫: ಈವರೆಗೆ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಆರ್. ಗೋವಿಂದರಾಜು ಅವರು ವಯೋನಿವೃತ್ತಿ ಹೊಂದಿದ ಹಿನ್ನೆಲೆ ನೂತನ ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ಅವರು ಅಧಿಕಾರ ಸ್ವೀಕರಿಸಿದರು.
೨೦೧೫ರಲ್ಲಿ ಗ್ರೇಡ್-೨ ತಹಶೀಲ್ದಾರ್ ಆಗಿ ಒಂದು ವರ್ಷಗಳ ಕಾಲ ನರಗುಂದ ಅವರು ಸೋಮವಾರಪೇಟೆ ತಾಲೂಕು ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೇವೆ ಸಲ್ಲಿಸಿ, ಹೆಚ್.ಡಿ.ಕೋಟೆ ತಾಲೂಕು ತಹಶೀಲ್ದಾರ್ ಆಗಿ ಒಂದು ವರ್ಷ ಕರ್ತವ್ಯ ನಿರ್ವಹಿಸಿದ್ದರು.
ಇದೀಗ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.