ಮಡಿಕೇರಿ, ಸೆ. ೫: ಸ್ವಾತಂತ್ರö್ಯ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿ ವೀರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಗಳಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
‘ರಾಷ್ಟçಧ್ವಜದ ಮಹತ್ವ’ ಹಾಗೂ ‘ಆಜಾದಿ ಕ ಅಮೃತ ಮಹೋತ್ಸವ’ದ ಕುರಿತಂತೆ ಉಪನ್ಯಾಸವನ್ನು ನೀಡಲಾಯಿತು. ವಿದ್ಯಾರ್ಥಿಗಳಿಗೆ ರಾಷ್ಟçಧ್ವಜದ ಬಗ್ಗೆ ಚಿತ್ರಕಲಾ ಸ್ಪರ್ಧೆ ಮತ್ತು ದೇಶಭಕ್ತಿ ಗೀತೆಯ ಸಮೂಹ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ರಾಷ್ಟçಧ್ವಜವನ್ನು ಸ್ಥಳದಲ್ಲಿಯೇ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ೩೩ ವಿದ್ಯಾರ್ಥಿಗಳ ತಂಡವು ಉತ್ಸಾಹದಿಂದ ಪಾಲ್ಗೊಂಡಿತ್ತು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವೇರಿ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಸಿ.ಕೆ. ಉತ್ತಪ್ಪ ವಹಿಸಿ ಸ್ವಾತಂತ್ರö್ಯ ಹೋರಾಟಗಾರರ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾವೇರಿ ಎಜುಕೇಶನ್ ಸೊಸೈಟಿಯ ನಿರ್ದೇಶಕ ಪ್ರೊ. ಇಟ್ಟೀರ ಕೆ. ಬಿದ್ದಪ್ಪ, ಕೊಡಗಿನ ಸ್ವಾತಂತ್ರö್ಯ ಹೋರಾಟಗಾರರ ತ್ಯಾಗ ಬಲಿದಾನದ ಬಗ್ಗೆ ಮಾಹಿತಿ ನೀಡಿದರು. ಅತಿಥಿಯಾಗಿ ಆಗಮಿಸಿದ್ದ ಪ್ರೊ. ಕಮಲಾಕ್ಷಿ ಬಿದ್ದಪ್ಪ ವಿದ್ಯಾರ್ಥಿಗಳಿಗೆ ಹಿತವಚನವನ್ನು ನೀಡಿದರು.
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ. ದಮಯಂತಿ ವಂದಿಸಿದರು.