ಮಡಿಕೇರಿ, ಸೆ. ೬: ಪ್ರಸಕ್ತ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷö್ಮ ಮತ್ತು ಅತೀಸೂಕ್ಷö್ಮ ಹಾಗೂ ಅರಣ್ಯ ಆಧಾರಿತ ಆದಿವಾಸಿಗಳ ಸಮುದಾಯ ಕೋಶದಿಂದ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಯೋಜನೆಗಳು, ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ ಈ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳು ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಲಭ್ಯವಿದೆ. ಫಲಾಪೇಕ್ಷಿಗಳು ‘ಗ್ರಾಮಒನ್’ ಅಥವಾ ‘ಬೆಂಗಳೂರು ಒನ್’ ಅಥವಾ ‘ಕರ್ನಾಟಕ ಒನ್’ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ hಣಣಠಿs://ಞmvsಣಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಪಡೆದುಕೊಳ್ಳುವುದು. ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾAಶದ ವೆಬ್ಸೈಟ್ ವಿಳಾಸ hಣಣಠಿs://sevಚಿsiಟಿಜhu..ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಲು ತಾ. ೧೫ ರವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿಯನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-೫೭೧೨೦೧ ದೂರವಾಣಿ ಸಂಖ್ಯೆ ೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸಾಲ ಸೌಲಭ್ಯಕ್ಕೆ
ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಕಾö್ಯವೆಂರ್ಸ್ ಫಲಾಪೇಕ್ಷಿಗಳಿಂದ ಸ್ವಯಂ ಉದ್ಯೋಗ ಯೋಜನೆಗಳು, ಸ್ವಯಂ ಉದ್ಯೋಗ ಉದ್ಯಮ ಶೀಲತಾ ಯೋಜನೆ-೧, ಉದ್ಯಮ ಶೀಲತಾ ಯೋಜನೆ-೨, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ, ಪೌರ ಕಾರ್ಮಿಕ/ ಸಫಾಯಿ ಕರ್ಮಚಾರಿ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣಾ ಯೋಜನೆ, ಬ್ಯಾಟರಿ ಚಾಲಿತ / ಇತರೆ ದ್ವಿಚಕ್ರ ವಾಹನ ಯೋಜನೆ ಈ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. ೨೦ ರವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಸುವಿಧಾ ತಂತ್ರಾAಶದ ವೆಬ್ಸೈಟ್ ವಿಳಾಸ: hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.
ಈ ಯೋಜನೆಗಳ ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವೆಬ್ಸೈಟ್ hಣಣಠಿs://ಞssಞಜಛಿ.ಞಚಿಡಿ.ಟಿiಛಿ.iಟಿ ನಲ್ಲಿ ಪಡೆದುಕೊಳ್ಳಬಹುದು. ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ., ನಿಯಮಿತ, ಕೊಡಗು ಜಿಲ್ಲೆ-೫೭೧೨೦೧ ದೂ.ಸಂ.೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸಾಮಾನ್ಯ ಪದವಿ ಕೋರ್ಸ್ ಪ್ರವೇಶಕ್ಕೆ
ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಇತರೆ ಜನಾಂಗಕ್ಕೆ ಸೇರಿದ ಸಾಮಾನ್ಯ ಪದವಿ ಕೋರ್ಸಿನ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೧೨ ಕೊನೆಯ ದಿನವಾಗಿದೆ. ಅರ್ಜಿ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ. ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-೧, ಎಸ್.ಸಿ & ಎಸ್.ಟಿ. ರೂ. ೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ರೂ.೧ ಲಕ್ಷ. ಹೆಚ್ಚಿನ ಮಾಹಿತಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಮಡಿಕೇರಿ ತಾಲೂಕು ಕಚೇರಿ ಮೊ.ಸಂ. ೮೭೬೨೪೭೬೭೯೦, ವೀರಾಜಪೇಟೆ ತಾಲೂಕು ಕಚೇರಿ ಮೊ.ಸಂ.೯೮೪೪೫೩೧೦೪೦, ಸೋಮವಾರಪೇಟೆ ತಾಲೂಕು ಕಚೇರಿ ಮೊ.ಸಂ.೯೪೮೧೭೭೨೧೪೩ ಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.
ಜೇನುಕುರುಬ-ಕೊರಗ ಸಮುದಾಯದ ವಿದ್ಯಾವಂತರಿಗೆ ಶೈಕ್ಷಣಿಕ ಪ್ರೋತ್ಸಾಹಧನ
ಪ್ರಸಕ್ತ ಸಾಲಿನ ಪರಿಶಿಷ್ಟ ಪಂಗಡದ ಜೇನುಕುರುಬ ಹಾಗೂ ಕೊರಗ ಸಮುದಾಯದ ವಿದ್ಯಾವಂತ ಯುವಕ- ಯುವತಿಯರಿಗೆ ಶೈಕ್ಷಣಿಕ ಪ್ರೋತ್ಸಾಹಧನ ಮತ್ತು ನಿರುದ್ಯೋಗಿಗಳಿಗೆ ಜೀವನ ಭತ್ಯೆ ಮಂಜೂರು ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಸಂಬAಧಪಟ್ಟ ಸೂಕ್ತ ದಾಖಲಾತಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಕಚೇರಿಗೆ ಸಲ್ಲಿಸಬೇಕು.
ಜೇನುಕುರುಬ ಮತ್ತು ಕೊರಗ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹಧನದ ವಿವರ: ಎಸ್ಎಸ್ಎಲ್ಸಿ ಆದವರಿಗೆ ೧೦ ಸಾವಿರ ರೂ., ಪಿಯುಸಿ ಮತ್ತು ತತ್ಸಮಾನ ಕೋರ್ಸ್ಗಳು (ಪ್ರತಿ ವರ್ಷಕ್ಕೆ) ೧೨ ಸಾವಿರ ರೂ, ಎಲ್ಲಾ ಪದವಿ ಕೋರ್ಸ್ಗಳು (ಪ್ರತಿ ವರ್ಷಕ್ಕೆ) ೧೫ ಸಾವಿರ ರೂ, ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳು (ಪ್ರತಿ ವರ್ಷಕ್ಕೆ) ೧೮ ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತದೆ.
ಅಭ್ಯರ್ಥಿಗಳು ೨೦೨೧-೨೨ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬAಧಿಸಿದ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರ ಲಗತಿಬೇಕು. ಈ ಕೋರ್ಸ್ಗಳಲ್ಲಿ ಅಭ್ಯರ್ಥಿಗಳು ವ್ಯಾಸಂಗವನ್ನು ಮುಂದುವರಿಸದೇ ನಿಲ್ಲಿಸಿದಲ್ಲಿ ಅಂತಹ ಅಭ್ಯರ್ಥಿಗಳ ಶೈಕ್ಷಣಿಕ ಪ್ರೋತ್ಸಾಹಧನ ರದ್ದುಪಡಿಸಲಾಗುವುದು. ಅಭ್ಯರ್ಥಿಗಳು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ವಿವರವನ್ನು ಸಲ್ಲಿಸುವುದು. ಅಭ್ಯರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ವ್ಯಾಸಂಗ ದೃಢೀಕರಣ ಪತ್ರ, ವಕೀಲರಿಂದ ಅಫಿಡವಿಟ್ ಸಲ್ಲಿಸಬೇಕು.
ಜೇನುಕುರುಬ ಮತ್ತು ಕೊರಗ ವಿದ್ಯಾವಂತ ಯುವಕ ಯುವತಿಯರಿಗೆ ನೀಡುವ ನಿರುದ್ಯೋಗಿ ಜೀವನ ಭತ್ಯೆ ವಿವರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ೨ ಸಾವಿರ ರೂಗಳು, ಪಿಯುಸಿ ಮತ್ತು ತತ್ವಮಾನ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ೨೫೦೦ ರೂಗಳು, ಎಲ್ಲಾ ಪದವಿ ಕೋರ್ಸ್ಗಳಲ್ಲಿ ತೇರ್ಗಡೆಯಾದವರಿಗೆ ೩೫೦೦ ರೂ.ಗಳು, ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳಲ್ಲಿ ತೇರ್ಗಡೆಯಾದವರಿಗೆ ೪,೫೦೦ ರೂ. ಗಳು ದೊರೆಯುತ್ತವೆ.
ನಿರುದ್ಯೋಗಿ ಜೀವನ ಭತ್ಯೆಗೆ ಗರಿಷ್ಠ ವಯೋಮಿತಿ ೪೦ ವರ್ಷದ ಒಳಗಿರಬೇಕು. ನಿರುದ್ಯೋಗಿಯೆಂದು ನೋಟರಿಯಿಂದ ಅಫಿಡವಿಟ್ನ್ನು ಪಡೆದು ಸ್ವವಿವರ (ಬಯೋಡಾಟ) ದೊಂದಿಗೆ ಸಲ್ಲಿಸತಕ್ಕದ್ದು.
ಜೀವನ ಭತ್ಯೆಯನ್ನು ಸರ್ಕಾರ ಖಾಸಗಿ/ಸ್ವಯಂ ಉದ್ಯೋಗಗಳಡಿ ಉದ್ಯೋಗ ದೊರಕಿದ ಅಥವಾ ಮೂರು ವರ್ಷಗಳ ಅವಧಿಗೆ ಯಾವುದು ಮೊದಲು ಅಲ್ಲಿಯವರೆಗೆ ಮಾತ್ರ ಪಾವತಿಸಲಾಗುವುದು. ಈ ಜೀವನ ಭತ್ಯೆಯನ್ನು ಪಡೆಯುವ ಅಭ್ಯರ್ಥಿಗಳು ಕೌಶಲ್ಯಭಿವೃದ್ಧಿಗೆ/ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಡ್ಡಾಯವಾಗಿ ತರಬೇತಿ ಪಡೆಯತಕ್ಕದ್ದು. ನಿರುದ್ಯೋಗಿ ಜೀವನ ಭತ್ಯೆ ಮಂಜೂರಾತಿಗೆ ಅಭ್ಯರ್ಥಿಗಳ ವಿವರ, ಶೈಕ್ಷಣಿಕ ವಿದ್ಯಾರ್ಹತೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಫಿಡವಿಟ್, ಬ್ಯಾಂಕ್ ಖಾತೆ ವಿವರದ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ:೦೮೨೭೬-೨೮೧೧೧೫ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.