ಮಡಿಕೇರಿ, ಸೆ. ೬: ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವದಲ್ಲಿ ಕಳೆದ ೧೦೩ ವರ್ಷಗಳಿಂದ ಪಾಲ್ಗೊಳ್ಳುತ್ತಾ ಬಂದಿರುವ ದೇಚೂರು ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ ಈ ಬಾರಿ ೧೦೪ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷ ವಿ. ವೇಣುಗೋಪಾಲ್ ತಿಳಿಸಿದ್ದಾರೆ.
ವಿಷ್ಣುವಿನಿಂದ ಮಧು ಖೈಟಬರ ಸಂಹಾರ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲು ತೀರ್ಮಾನಿಸಲಾಗಿದ್ದು, ಎರಡು ಟ್ರಾö್ಯಕ್ಟರ್ಗಳನ್ನು ಬಳಸಲಾಗುತ್ತಿದೆ. ದಿಂಡಿಗಲ್ನ ಜೇಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದು, ಪ್ಲಾಟ್ಫಾರಂನ್ನು ಮಡಿಕೇರಿಯ ಅನಿಲ್ಕುಮಾರ್ ನಿರ್ಮಿಸಲಿದ್ದಾರೆ. ಟ್ರಾö್ಯಕ್ಟರ್ ಸೆಟ್ಟಿಂಗ್ಸ್ನ್ನು ಪುಣ್ಯ ಕ್ರಿಯೆಟಿವ್ ಕೂರ್ಗ್ ತಂಡ ಮಾಡಲಿದ್ದು, ೧೩ ಕಲಾಕೃತಿಗಳನ್ನು ಬಳಸಲಾಗುತ್ತಿದೆ. ಮಂಗಳೂರಿನ ಜೆ.ಪಿ. ಆರ್ಟ್ಸ್ ಕಲಾಕೃತಿಗಳನ್ನು ತಯಾರಿಸಲಿದ್ದು, ಕಲಾಕೃತಿಗಳಿಗೆ ಚಲನ - ವಲನವನ್ನು ಸಮಿತಿ ಸದಸ್ಯರೆ ನೀಡಲಿದ್ದಾರೆ. ಹುಬ್ಬಳ್ಳಿಯ ಕ್ರಿಷ್ ತಂಡ ಧ್ವನಿವರ್ಧಕ ಹಾಗೂ ಸ್ಟುಡಿಯೋ ಸೆಟ್ಟಿಂಗ್ಸ್ ವ್ಯವಸ್ಥೆ ಮಾಡಲಿದೆ. ಒಟ್ಟು ೧೫ ಲಕ್ಷ ರೂ. ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಜನಾಕರ್ಷಣೆಯೊಂದಿಗೆ ಬಹುಮಾನಕ್ಕೂ ಪೈಪೋಟಿ ನೀಡುವುದಾಗಿ ವೇಣುಗೋಪಾಲ್ ಮಾಹಿತಿ ನೀಡಿದರು. - ಉಜ್ವಲ್ ರಂಜಿತ್