ವೀರಾಜಪೇಟೆ, ಸೆ. ೬: ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬಾಲಾಂಜನೇಯ ದೇವಾಸ್ಥಾನದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣನ ಛದ್ಮವೇಷ ಹಾಗೂ ನೃತ್ಯ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪುಷ್ಪಲತಾ ಮಾತನಾಡಿ, ವಿದ್ಯಾರ್ಥಿಗಳು ರಾಮಾಯಣ ಮಹಾಭಾರತದಂತಹ ಕಾವ್ಯಗಳನ್ನು ಹೆಚ್ಚು ಹೆಚ್ಚಾಗಿ ಓದಿ ಅದರಲ್ಲಿರುವ ತತ್ವಸಾರವನ್ನು ತಿಳಿದು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ನುಡಿದರು.
ಕರ್ನಾಟಕ ರಕ್ಷಣಾ ವೇದಿಕೆ ವೀರಾಜಪೇಟೆ ತಾಲೂಕು ಅಧ್ಯಕ್ಷ ಟಿ.ವಿ. ಅನಿಲ್ ಕುಮಾರ್ ಮಾತನಾಡಿ, ಶ್ರೀ ಕೃಷ್ಣ ಜನ್ಮಾಷ್ಟಮಿಯು ನಮ್ಮ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಬಹಳ ಮಹತ್ವ ಪಡೆದಿದೆ. ಮಕ್ಕಳಿಗೆ ಶಾಲೆಯ ವಿಷಯಗಳಿಂದ ಭಿನ್ನವಾಗಿ ತಮ್ಮನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವ ಈ ಸ್ಪರ್ಧೆಗಳು ಮನೆ ಹಿರಿಯರನ್ನೂ ಮಕ್ಕಳೊಂದಿಗೆ ಮಕ್ಕಳಂತೆ ಸಂತೋಷಪಟ್ಟುಕ್ಕೊಳ್ಳಲು ಉತ್ತಮ ಅವಕಾಶವಾಗಿದೆ ಎಂದರು.
ಮುಖ್ಯ ಅತಿಥಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿ ಸದಸ್ಯೆ, ಸಾಹಿತಿ ರಜಿತ ಕಾರ್ಯಪ್ಪ ಮಾತನಾಡಿ ಮಕ್ಕಳಿಗೆ ಸಂಸ್ಕöÈತಿ, ಸಂಸ್ಕಾರದ ತಿಳುವಳಿಕೆಯ ಜೊತೆಗೆ ನಾಯಕತ್ವದ ಗುಣಗಳನ್ನು ಗಳಿಸಲು ಸ್ಪರ್ಧೆಗಳು ಬಹು ಸಹಕಾರಿಯಾಗಿದೆ. ನೃತ್ಯ ಶಾಲೆಯ ವಿದ್ಯಾರ್ಥಿಗಳು ರಾಷ್ಟç ಮಟ್ಟದಲ್ಲಿ ಹೆಸರು ಗಳಿಸುವಂತಾಗಲಿ ಎಂದು ಆಶಿಸಿದರು
ಬಾಲಾಂಜನೇಯ ದೇವಸ್ಥಾನದ ಅಧ್ಯಕ್ಷ ಬಾಬಾ ಶಂಕರ್, ನಾಟ್ಯ ಮಯೂರಿ ನೃತ್ಯ ಶಾಲೆಯ ಶಿಕ್ಷಕಿ ವಿದೂಷಿ ಪ್ರೇಮಾಂಜಲಿ ಆಚಾರ್ಯ ಮಾತನಾಡಿದರು. ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಮಕ್ಕಳು ಮುದ್ದು ಕೃಷ್ಣ ಮತ್ತು ಗೋಪಿಕೆಯರ ವೇಷದಲ್ಲಿ ಕಂಗೊಳಿಸಿದರು ಮತ್ತು ಶ್ರೀ ಕೃಷ್ಣನ ವಿವಿಧ ಸನ್ನಿವೇಶಗಳನ್ನೊಳಗೊಂಡ ನೃತ್ಯ ಪ್ರದರ್ಶನವನ್ನು ನೀಡಿದರು.