ಸೋಮವಾರಪೇಟೆ, ಸೆ. ೬: ಸಮೀಪದ ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೧-೨೨ರ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿಗಳ ಸಮಾರೋಪ ಸಮಾರಂಭ ನಡೆಯಿತು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎಂ. ಪ್ರವೀಣ್ ಕುಮಾರ್ ಮಾತನಾಡಿ, ಪದವಿಯ ಕಾಲಘಟ್ಟವು ವಿದ್ಯಾರ್ಥಿಗಳ ಬದುಕಿನ ಅಮೂಲ್ಯ ಘಟ್ಟ. ಅದನ್ನು ಯಶಸ್ವಿಯಾಗಿ ಪೂರೈಸಿ ತೆರಳುತ್ತಿರುವ ಎಲ್ಲರ ಜೀವನ ಸುಖಮಯವಾಗಿರಲಿ ಎಂದು ಹಾರೈಸಿದರು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಹೆಚ್.ಎನ್. ರಾಜು ಉದ್ಘಾಟಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಧ್ಯಾಪಕರುಗಳಾದ ಕೆ.ಹೆಚ್. ಧನಲಕ್ಷಿö್ಮ, ಎಂ.ಎಸ್. ಶಿವಮೂರ್ತಿ ಸೇರಿದಂತೆ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಇದ್ದರು.