ಗೋಣಿಕೊಪ್ಪಲು, ಸೆ. ೫: ಗೋಣಿಕೊಪ್ಪಲುವಿನ ಹಿಂದೂ ಮಲಯಾಳಿ ಸಮಾಜದ ಸಭಾಂಗಣದಲ್ಲಿ ಪೊನ್ನಂಪೇಟೆ ತಾಲೂಕು ಖಾಸಗಿ ಬಸ್ ಕಾರ್ಮಿಕರ ಸಂಘದಿAದ ಕುಂದು ಕೊರತೆ ಸಭೆ ಆಯೋಜಿಸಲಾಗಿತ್ತು. ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಗೋಣಿಕೊಪ್ಪ ಠಾಣಾಧಿಕಾರಿ ದೀಕ್ಷಿತ್ ಕುಮಾರ್ ಖಾಸಗಿ ಬಸ್ ಚಾಲಕರು ಸೇರಿದಂತೆ ಮಾಲೀಕರು ಪ್ರತಿ ನಿತ್ಯ ನಾಗರಿಕರೊಂದಿಗೆ ಸಂಪರ್ಕ ಸಾಧಿಸುವುದರಿಂದ ಉತ್ತಮ ಒಡನಾಟವಿರುತ್ತದೆ. ಹೀಗಾಗಿ ಇಲಾಖೆಯ ಸಂಚಾರ ನಿಯಮಗಳನ್ನು ಅಳವಡಿಸಿಕೊಂಡು ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಸಂಘದ ಸದಸ್ಯರಾಗಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.

ನಗರದ ಪೊನ್ನಂಪೇಟೆ ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗಳು ಪ್ರಯಾಣಿಕರನ್ನು ಹತ್ತಿಸುತ್ತಿರುವುದರಿಂದ ಮೈಸೂರು ಗೋಣಿಕೊಪ್ಪ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಹೀಗಾಗಿ ಜಂಕ್ಷನ್ ಬಳಿ ಬಸ್ ನಿಲುಗಡೆ ಮಾಡುವುದನ್ನು ಪೊಲೀಸ್ ಇಲಾಖೆ ನಿರ್ಬಂಧಿಸಿದೆ. ಬದಲಾಗಿ ಪೆಟ್ರೋಲ್ ಬಂಕ್ ಮುಂಭಾಗದ ಜಾಗದಲ್ಲಿ ಪ್ರಯಾಣಿಕರನ್ನು ಬಸ್‌ಗಳನ್ನು ಹತ್ತಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.

ಖಾಸಗಿ ಬಸ್ ಕಾರ್ಮಿಕರ ಸಂಘದ ಅಧ್ಯಕ್ಷರಾದ ಎಂ.ಪಿ.ರಾಜ ಅಧ್ಯಕ್ಷತೆ ವಹಿಸಿ ಮಾತನಾಡಿ ಕಳೆದ ಕೆಲವು ತಿಂಗಳಿನಿAದ ಸಂಘವು ಪೊನ್ನಂಪೇಟೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು ೭೦ ಸದಸ್ಯರು ಸಂಘದಲ್ಲಿ ನೋಂದಾವಣೆಯಾಗಿದ್ದಾರೆ. ಸಂಘದ ಸದಸ್ಯರ ಹಿತ ಕಾಪಾಡುವ ನಿಟ್ಟಿನಲ್ಲಿ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ. ಪೊಲೀಸ್ ಇಲಾಖೆ ಹಾಗೂ ಬಸ್ ಕಾರ್ಮಿಕರ ಸಂಘದ ನಡುವೆ ಉತ್ತಮ ಬಾಂಧವ್ಯಕ್ಕಾಗಿ ಸಭೆಯನ್ನು ಆಯೋಜಿಸಲಾಗಿದೆ. ಇಲಾಖೆಯ ನಿಯಮಗಳನ್ನು ಸದಸ್ಯರೆಲ್ಲರೂ ಚಾಚೂ ತಪ್ಪದೆ ಪಾಲಿಸುವಂತೆ ಕೋರಿದರು.

ಅತಿಥಿಗಳಾಗಿ ಮಾತನಾಡಿದ ಸಂಘದ ಗೌರವ ಅಧ್ಯಕ್ಷ ಹಾಗೂ ಗ್ರಾ.ಪಂ. ಸದಸ್ಯ ಬಿ.ಎನ್. ಪ್ರಕಾಶ್ ಮಾತನಾಡಿ, ಕಾರ್ಮಿಕರು ಪ್ರತಿನಿತ್ಯ ಮುಂಜಾನೆಯಿAದ ಸಂಜೆಯ ತನಕ ತಮ್ಮ ಸೇವೆಯನ್ನು ಸಾರ್ವಜನಿಕರಿಗೆ ನೀಡುತ್ತಿದ್ದಾರೆ. ಇದೀಗ ಸಂಘವನ್ನು ಅಸ್ತಿತ್ವಕ್ಕೆ ತರುವ ಮೂಲಕ ಒಗ್ಗಟ್ಟನ್ನು ಕಾಪಾಡಿಕೊಂಡು ತಮ್ಮ ಆರ್ಥಿಕತೆಯನ್ನು ಉತ್ತಮ ಪಡಿಸಿಕೊಳ್ಳಲು ಅವಕಾಶವಾಗಿದೆ ಎಂದರು.

ಸಭೆಯಲ್ಲಿ ಹಾತೂರು ಗ್ರಾಮ ಪಂಚಾಯಿತಿ ಸದಸ್ಯ ಮುತ್ತುರಾಜು ವಿಮಾ ಸೌಲಭ್ಯದ ಬಗ್ಗೆ ಮಾಹಿತಿ ಒದಗಿಸಿದರು. ಸಂಘದ ಕಾರ್ಯದರ್ಶಿಗಳಾದ ಸಮ್ಮದ್, ಖಜಾಂಜಿ ಟಿ.ಎನ್. ರವಿ ಹಾಗೂ ಉಪಾಧ್ಯಕ್ಷ ಪುಲಿಯಂಡ ಅರುಣ ಉಪಸ್ಥಿತರಿದ್ದರು. ಧನು ಸ್ವಾಗತಿಸಿ ಟಿ.ಎನ್. ಬೆಳ್ಯಪ್ಪ ವಂದಿಸಿದರು. ವಾಹನ ಚಾಲಕರು ನಿರ್ವಾಹಕರು ಸೇರಿದಂತೆ ಇನ್ನಿತರ ಸದಸ್ಯರು ಸಭೆಯಲ್ಲಿ ಹಾಜರಿದ್ದರು.