ಸಿದ್ದಾಪುರ, ಸೆ. ೫: ಮೊಗೇರ ಸೇವಾ ಸಮಾಜ ಕುಶಾಲನಗರ ತಾಲೂಕು ಶಾಖೆ ವತಿಯಿಂದ ಮೊಗೇರ ಗ್ರಾಮ ವಿಕಾಸ ಯೋಜನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ವಾಲ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮೊಗೇರ ಸಮಾಜದ ಕೊಡಗು ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮೊಗೇರ ಸಮಾಜವು ಶ್ರಮಿಕ ವರ್ಗದವರನ್ನು ಒಳಗೊಂಡ ಸಮುದಾಯವಾಗಿದೆ. ಸಮಾಜ ಬಾಂಧವರು ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಮೊಗೇರ ಗ್ರಾಮ ವಿಕಾಸ ಯೋಜನೆಯ ಸಂಚಾಲಕ ಸುರೇಶ್ ಪ್ರಾಸ್ತಾವಿಕ ವಾಗಿ ಮಾತನಾಡಿ, ಸರಕಾರದ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸಿದರು. ಕಾರ್ಯ ಕ್ರಮದಲ್ಲಿ ಮೊಗೇರ ಸಮಾಜದ ಸ್ಥಾಪಕ ಅಧ್ಯಕ್ಷ ಸದಾನಂದ ಮಾಸ್ಟರ್, ಮೊಗೇರ ಸಂಘದ ರಾಜ್ಯ ಉಪಾಧ್ಯಕ್ಷ ಬಿ. ಶಿವಪ್ಪ ಮಾತನಾಡಿದರು. ಈ ಸಂದÀರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೊಗೇರ ಸಂಘದ ಸದಸ್ಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮೊಗೇರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜನಾರ್ಧನ, ಸಿದ್ದಾಪುರ ಅಮೃತ ಯುವ ಮೊಗೇರ ಸಂಘ ಅಧ್ಯಕ್ಷ ಮಂಜು, ಚೆಟ್ಟಳ್ಳಿ ಗ್ರಾ.ಪಂ. ಅಧ್ಯಕ್ಷ ಮುತ್ತಪ್ಪ, ಅರಣ್ಯ ಅಧಿಕಾರಿ ರಾಘವ್, ಶಿಕ್ಷಣ ಇಲಾಖಾಧಿಕಾರಿ ಬಾಬು, ಮೊಗೇರ ಸಂಘದ ಕುಶಾಲನಗರ ತಾಲೂಕು ಅಧ್ಯಕ್ಷ ಗಣೇಶ್, ಉಪಾಧ್ಯಕ್ಷೆ ಪ್ರೇಮ ಇನ್ನಿತರರು ಹಾಜರಿದ್ದರು.