ಸುಂಟಿಕೊಪ್ಪ, ಸೆ. ೫: ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಿಕ್ಷಣದ ಅವಧಿಯಲ್ಲಿ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳುವಂತೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪಿ.ಎಸ್. ಜಾನ್ ಸಲಹೆ ನೀಡಿದರು.

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ವಿದ್ಯಾರ್ಥಿ ಸಾಂಸ್ಕೃತಿಕ ಸಂಘಕ್ಕೆ ಚಾಲನೆ ಹಾಗೂ ೨೦೨೧-೨೨ನೇ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾರಂಭವನ್ನು ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವೈ.ಎಂ. ಕರುಂಬಯ್ಯ ಉದ್ಘಾಟಿಸಿದರು.

ಈ ಸಂದರ್ಭ ೨೦೨೧-೨೨ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಾಣಿಜ್ಯ ವಿಭಾಗದಲ್ಲಿ ಸೌಮ್ಯ, ವಿಜ್ಞಾನ ವಿಭಾಗದಲ್ಲಿ ತಾಹಿರಾ, ಸಫಿನ ಎಂಬ ವಿದ್ಯಾರ್ಥಿ ಹಾಗೂ ಪೋಷಕರನ್ನು ಗೌರವಿಸಲಾಯಿತು. ಸಾಂಸ್ಕೃತಿಕ ಸಂಘಕ್ಕೆ ನೇಮಕಗೊಂಡ ವಿದ್ಯಾರ್ಥಿ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಕಾಲೇಜಿನ ಉಪನ್ಯಾಸಕ ಎಸ್.ಹೆಚ್. ಈಶ ಬೋಧಿಸಿದರು. ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿಯ ಖಜಾಂಚಿಗಳಾದ ಆರ್.ರಮೇಶ್ ಪಿಳ್ಳೆ, ಕಾಲೇಜಿನ ಉಪನ್ಯಾಸಕರಾದ ಕೆ.ಸಿ. ಕವಿತಾ, ಪದ್ಮಾವತಿ, ಜಯಶ್ರೀ, ಸುಚಿತ್ರಾ, ಸರಳ, ಕನಕ, ನದಿಯಾ, ಅಭಿಷೇಕ್, ಕೋಕಿಲ ಮತ್ತಿತರರು ಇದ್ದರು.