ಚೆಟ್ಟಳ್ಳಿ, ಸೆ. ೫: ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಳಕೆಯಿಂದ ದೂರ ಉಳಿದು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಡಿಎಚ್‌ಓ ಡಾ. ಆರ್. ವೆಂಕಟೇಶ್ ಕರೆ ನೀಡಿದರು. ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್ ಘಟಕ ಮತ್ತು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಕೊಡಗು ಜಿಲ್ಲೆ ವತಿಯಿಂದ ಆಯೋಜಿಸ ಲಾಗಿದ್ದ ಅಂರ‍್ರಾಷ್ಟಿçÃಯ ಯುವ ದಿನಾಚರಣೆ ೨೦೨೨ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಆರ್. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಯತಿರಾಜ್ ಅವರು ಮಾತನಾಡಿ, ಭಾರತದಲ್ಲಿ ಮಾನವ ಸಂಪನ್ಮೂಲದ ಕೊರತೆ ಇಲ್ಲ. ಅದನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ರಾಷ್ಟçವನ್ನು ಮುನ್ನಡೆಸುವಲ್ಲಿ ಸಕ್ರಿಯರಾಗಬೇಕು. ಹಾಗೆಯೇ ವಿದ್ಯಾರ್ಥಿಗಳೆಲ್ಲರೂ ಕೋವಿಡ್ ಬೂಸ್ಟರ್ ಡೋಸ್ ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಮೇಲ್ವಿಚಾರಕÀ ಸುನಿತ ಮುತ್ತಣ್ಣ ಮಾತನಾಡಿ ಹೆಚ್ .ಐ.ವಿ. ಕುರಿತು ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ ಯುವಕರು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳ ಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ರೆಡ್ ರಿಬ್ಬನ್ ಅಧಿಕಾರಿಗಳಾದ ರಘುರಾಜ್ ಆರ್. ಆರ್.ಹೆಚ್.ಓ. ಅಧಿಕಾರಿ ಗೋಪಿನಾಥ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಿಬ್ಬಂದಿಗಳು ಉಪಸ್ಥಿತರಿದ್ದರು.