ಸುAಟಿಕೊಪ್ಪ: ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಚಾಲನೆ ನೀಡಿದರು. ಸುಂಟಿಕೊಪ್ಪ ಸಂತ ಮೇರಿ ಶಾಲಾ ಸಭಾಂಗಣದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರವನ್ನು ಆಯೋಜಿಸಲಾಗಿದ್ದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಮಹೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದ ವೇದಿಕೆಯಲ್ಲಿ ಸರಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಬಾಲಕೃಷ್ಣ, ಸೊಮವಾರಪೇಟೆ ತಾಲೂಕು ಕೋಶಾಧಿಕಾರಿ ಟಿ.ವಿ. ಶೈಲಾ, ಸೋಮವಾರಪೇಟೆ ತಾಲೂಕು ಲೆಕ್ಕಪರಿಶೋಧಕ ಎನ್. ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ರಫೀಕ್ ಖಾನ್, ವಸಂತಿ, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಆರ್.ಪಿ. ಸೆಲ್ವರಾಜ್, ಸಿ.ಆರ್.ಪಿ. ಸೀಮಾ ಮತ್ತಿತರರು ಇದ್ದರು.

ವಲಯದ ವಿವಿಧ ಶಾಲೆಗಳಿಂದ ನೂರಾರು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಹೆಬ್ಬಾಲೆ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಇದರಿಂದ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಹೆಬ್ಬಾಲೆ ಶಾಲೆಯ ಎಸ್.ಡಿ.ಎಂ.ಸಿ.ಯ ಉಪಾಧ್ಯಕ್ಷೆ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಎಸ್.ಬಿ. ಜ್ಯೋತಿ ಹೇಳಿದರು.

ಇಲ್ಲಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕ್ಲಸ್ಟರ್ ಕೇಂದ್ರದ ವತಿಯಿಂದ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅವರು ಮಾತನಾಡಿದರು.

ಶಾಲಾ ಮುಖ್ಯ ಶಿಕ್ಷಕರಾದ ಹೆಚ್ ಎಂ ವೆಂಕಟೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಒಂದೊAದು ಪ್ರತಿಭೆ ಅಡಗಿರುತ್ತದೆ ಪ್ರತಿಭೆಗೆ ಬೆಲೆಕಟ್ಟಲಾಗದು ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದರು.

ಬಿಇಓ ಕಚೇರಿಯ ಪರವಾಗಿ ಬಿಆರ್‌ಪಿ ಲೋಕೇಶ್ ಹಾಜರಿದ್ದು ದಿನದ ಮಹತ್ವದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಹೆಬ್ಬಾಲೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ನಾರಾಯಣ ಎಸ್.ಡಿ.ಎಂ.ಸಿ. ಅಧ್ಯಕ್ಷÀ ಮಂಜುನಾಥ್ ಮುಖ್ಯ ಶಿಕ್ಷಕರುಗಳಾದ ಸೂರ್ಯನಾರಾಯಣ್, ಕಾಮಾಕ್ಷಿ, ರಮೇಶ್, ಚಂದ್ರು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕರುಂಬಯ್ಯ, ಸಿಆರ್‌ಪಿ ಶಾಂತಕುಮಾರ್, ಎಸ್‌ಡಿಎಂಸಿ ಸದಸ್ಯರಾದ ಅಮೃತ ಉಪಸ್ಥಿತರಿದ್ದರು. ನಂತರ ನಿಗದಿಪಡಿಸಿದ ಕೊಠಡಿಗಳಲ್ಲಿ ಶಾಲಾ ಮಕ್ಕಳಿಂದ ಯಕ್ಷಗಾನ ಹಾಸ್ಯ ಮಿಮಿಕ್ರಿ ಭಾವಗೀತೆ ಜಾನಪದ ಗೀತೆ ಕನ್ನಡ ಭಾಷಣ ಭರತನಾಟ್ಯ ರಂಗೋಲಿ ಚರ್ಚಾ ಸ್ಪರ್ಧೆ ಡ್ರಾಯಿಂಗ್ ಮತ್ತು ಕ್ವಿಜ್ ಕಾರ್ಯಕ್ರಮಗಳು ನಡೆದವು. ಸಿಆರ್‌ಪಿ ಆದರ್ಶ್ ಸ್ವಾಗತಿಸಿದರು.ಶನಿವಾರಸಂತೆ: ಪಠ್ಯೇತರ ಚಟುವಟಿಕೆಗಳು ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ಅಂಗಗಳಾಗಿವೆ ಎಂದು ವಿದ್ಯಾಸಂಸ್ಥೆ ಅಧ್ಯಕ್ಷ ಆರ್.ಪಿ. ಲಕ್ಷö್ಮಣ್ ಅಭಿಪ್ರಾಯಪಟ್ಟರು.

ಸಮೀಪದ ಗಡಿಭಾಗ ಕಳಲೆ ಗ್ರಾಮದ ಬಸವೇಶ್ವರ ಪ್ರೌಢಶಾಲೆಯಲ್ಲಿ ನಡೆದ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಹೂವಣ್ಣ ಹಾಗೂ ಮುಖ್ಯ ಶಿಕ್ಷಕಿ ಇಂದಿರಮ್ಮ ಮಾತನಾಡಿ, ಸ್ಪರ್ಧೆಗಳಲ್ಲಿ ತಾರತಮ್ಯಕ್ಕೆ ಅವಕಾಶವಿಲ್ಲ. ಪ್ರತಿಭೆಗಳನ್ನು ಗುರುತಿಸಿ ಪ್ರಾಶಸ್ತö್ಯ ನೀಡಲಾಗುವುದು. ಶಿಕ್ಷಕರ ಸಲಹೆ, ಸಹಕಾರ ಮುಖ್ಯ ಎಂದರು.

ಸAಸ್ಥೆ ಕಾರ್ಯದರ್ಶಿ ಹೆಚ್.ಪಿ. ರವಿಕುಮಾರ್, ಸದಸ್ಯರಾದ ಸುದೀಪ್, ಬಾಲಕೃಷ್ಣ ಶೆಟ್ಟಿ, ಪ್ರಮುಖ ಕೃಷ್ಣೇಗೌಡ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎ.ಎನ್. ಜಯರಾಜ್ ಹಾಜರಿದ್ದರು.