*ಗೋಣಿಕೊಪ್ಪ: ಪೊನ್ನಪ್ಪಸಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಯಮುಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ವಿದ್ಯಾರ್ಥಿಗಳು ಛದ್ಮವೇಷ, ಕಂಠಪಾಠ, ಕ್ಲೇ ಮಾಡಲಿಂಗ್, ಚಿತ್ರಕಲೆ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಪೊನ್ನಪ್ಪಸಂತೆ ಗ್ರಾ.ಪಂ. ಅಧ್ಯಕ್ಷೆ ಚಿಯಕ್‌ಪೂವಂಡ ಪ್ರಭಾ ಚಿಣ್ಣಪ್ಪ ಅಧ್ಯಕ್ಷತೆಯಲ್ಲಿ ಪ್ರತಿಭಾ ಕಾರಂಜಿಗೆ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಚಾಲನೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ರಜನಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ, ಗ್ರಾಮ ಪಂಚಾಯಿತಿ ಸದಸ್ಯ ವಿನು ಚಂಗಪ್ಪ, ದಾನಿಗಳಾದ ಅದೇಂಗಡ ಸಂತೋಷ್ ಸೋಮಣ್ಣ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಕೆ. ಕುಮಾರ್, ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷÀ ಈ. ಸುರೇಂದ್ರ, ಉಪಾಧ್ಯಕ್ಷೆ ಭಾರತಿದೇವರಾಜು, ಸಂಘಟನಾ ಕಾರ್ಯದರ್ಶಿ ಪಾರ್ವತಿ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಯವಂಡ ಉತ್ತಪ್ಪ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕಾಡ್ಯಮಡ ಸುಬ್ಬಯ್ಯ, ಎಂಸಿಎಸ್ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ರಾಧಾ, ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ವಾಣಿ, ಶಿಕ್ಷಣ ಸಂಯೋಜಕರಾದ ಮಾರ್ಗರೇಟ್, ವಿಶಾಲಾಕ್ಷಮ್ಮ, ಬಿಆರ್‌ಪಿಗಳಾದ ಗೀತಾಂಜಲಿ, ಪುಷ್ಪಾ ಬಿಇಐಆರ್‌ಟಿಗಳಾದ ಅಜಿತಾ, ಕೇಶವಮೂರ್ತಿ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ತಿರುನೆಲ್ಲಿಮಡ ಜೀವನ್, ಕರುಂಬಯ್ಯ, ಪ್ರವೀಣ್, ರವಿ, ಶ್ರೀನಿವಾಸ, ಸುಷ, ರಾಧÀ, ಮುರುಗನ್, ಅನಿತಾಕುಮಾರಿ, ವೆಂಕಟೇಶ್, ಚಿಕ್ಕದೇವು, ಶಾಲಾ ಮುಖ್ಯ ಶಿಕ್ಷಿಕಿ ಸುಶೀಲ, ಸಹಶಿಕ್ಷಕರುಗಳಾದ ಶೋಭಾ, ಸಂಗೀತಾ, ಸಂದೇಶ್, ಸರಸ್ವತಿ, ಪ್ರೇಮಕುಮಾರಿ, ಸತ್ಯ, ಚೆನ್ನಂಗೊಲ್ಲಿ ಶಾಲೆಯ ಗಿರಿಜಾ, ದಾಕ್ಷಾಯಿಣಿ, ಸಹನಾ, ಸವಿv Àಕುಮಾರಿ ಇದ್ದರು.ಕೊಡ್ಲಿಪೇಟೆ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಪ್ರೌಢಶಾಲಾ ಶಿಕ್ಷಕರ ಪರಿಷತ್ ರಾಜ್ಯ ಕಾರ್ಯದರ್ಶಿ ಕೆ.ಪಿ. ಜಯಕುಮಾರ್ ಹೇಳಿದರು.ಕೊಡ್ಲಿಪೇಟೆ ಸಮೀಪದ ಕಲ್ಲುಮಠ ಎಸ್‌ಕೆಎಸ್ ಶಾಲೆಯಲ್ಲಿ ಆಯೋಜಿಸಿದ್ದ ಕೊಡ್ಲಿಪೇಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳಲ್ಲಿರುವ ಕಲೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಎಲ್ಲರಿಂದ ಆಗಬೇಕು ಎಂದರು.

ಕಲ್ಲುಮಠ ಶಾಲೆಯ ಕಾರ್ಯದರ್ಶಿ ಹೆಚ್.ಎ. ದಿವಾಕರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಎಲೆಮರೆ ಕಾಯಿಯಂತಿದ್ದಾರೆ. ಇವರುಗಳನ್ನು ಗುರುತಿಸಿ ಶಿಕ್ಷಕರು ಮತ್ತು ಪೋಷಕರು ಪ್ರೊತ್ಸಾಹಿಸಿದರೆ ಅವರು ಕಲೆಯಲ್ಲಿಯೇ ಭವಿಷ್ಯ ಕಟ್ಟಿಕೊಳ್ಳಲಿದ್ದಾರೆ ಎಂದು ಅಭಿಪ್ರಾಯಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೆಶಕ ಸುರೇಶ್, ಕಲ್ಲುಮಠ ಎಸ್‌ಕೆಎಸ್ ಶಾಲೆಯ ಉಪಾಧ್ಯಕ್ಷ ವಿಶ್ವನಾಥ್ ಕಲ್ಲುಮಠ ಆಡಳಿತಾಧಿಕಾರಿ ಪ್ರದೀಪ್, ಪ್ರಾಂಶುಪಾಲ ಅಭಿಲಾಶ್, ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿ ಕವಿತಾ, ಶಾಲಾಭಿವೃದ್ಧಿ ಸಮಿತಿ ಜಿಲ್ಲಾಧ್ಯಕ್ಷ ನಾಗೇಶ್, ಬ್ಯಾಡಗೊಟ್ಟ ಗ್ರಾ.ಪಂ. ಸದಸ್ಯ ಹನೀಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು.*ಗೋಣಿಕೊಪ್ಪ: ಕುಟ್ಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸುಬ್ರಮಣಿ ಅವರ ಅಧ್ಯಕ್ಷತೆಯಲಿ ಪ್ರತಿಭಾ ಕಾರಂಜಿ ನಡೆಸಲಾಯಿತು. ಸ್ಪರ್ಧಾ ಕಾರ್ಯಕ್ರಮಕ್ಕೆ ಎಸ್.ಡಿ.ಎಂ.ಸಿ. ಸದಸ್ಯ ಬಯವಂಡ ಉತ್ತಪ್ಪ ಚಾಲನೆ ನೀಡಿದರು.

ಮುಖ್ಯ ಶಿಕ್ಷಕ ಶಶಿಧರ್, ಶಿಕ್ಷಣ ಸಂಯೋಜಕ ವಿಶಾಲಾಕ್ಷಮ್ಮ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಪುಷ್ಪಾ, ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಡ ಜೀವನ್, ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಯ ಶಿಕ್ಷಕರು, ಅತಿಥಿ ಶಿಕ್ಷಕರು, ಪೊನ್ನಂಪೇಟೆ, ಬಾಳಲೆ ವ್ಯಾಪ್ತಿಯ ಶಿಕ್ಷಕರು ತೀರ್ಪುಗಾರರಾಗಿ ಭಾಗವಹಿಸಿದ್ದರು.ನಾಪೋಕ್ಲು: ಇಲ್ಲಿಗೆ ಸಮೀಪದ ಚೇರಂಬಾಣೆ ಕ್ಲಸ್ಟರ್‌ನ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಬೆಟ್ಟಗೇರಿ ಉದಯ ಪ್ರೌಢಶಾಲೆಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದಯ ಪ್ರೌಢಶಾಲೆಯ ಅಧ್ಯಕ್ಷರು ಮತ್ತು ಮಂಗಳೂರು ವಿಶ್ವವಿದ್ಯಾಲಯದ ಸದಸ್ಯ ತಳೂರು ಕಿಶೋರ್‌ಕುಮಾರ್ ವಹಿಸಿದ್ದರು. ಉದ್ಘಾಟನೆಯನ್ನು ಬೆಟ್ಟಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಪಂಡ ರ‍್ಯಾಲಿ ಮಾದಯ್ಯ ಅವರು ನೆರವೇರಿಸಿದರು. ಮಡಿಕೇರಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಬಡ್ಡಿರ ನಳಿನಿ ಪ್ರಾಸ್ತಾವಿಕ ನುಡಿಯಾಡಿ ಎಲ್ಲರಿಗೂ ಶುಭ ಹಾರೈಸಿದರು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೊಡಪಾಲು ಗಪ್ಪು ಗಣಪತಿ, ಉದಯ ಸಂಸ್ಥೆ ಉಪಾಧ್ಯಕ್ಷ ಜಗದೀಶ್ ರೈ, ನಿರ್ದೇಶಕ ಗಣೇಶ್ ರೈ ಆಗಮಿಸಿದ್ದರು. ಕಲೋತ್ಸವದಲ್ಲಿ ಚೇರಂಬಾಣೆ ಕ್ಲಸ್ಟರ್‌ನ ೧೪ ಶಾಲೆಗಳ ಮಕ್ಕಳಿಂದ ಸಂಸ್ಕೃತಿ ಪೈಪೋಟಿ ನಡೆಯಿತು. ಕೇಂದ್ರದ ವಿಶೇಷ ಶಿಕ್ಷಕರು, ವಿದ್ಯಾರ್ಥಿಗಳು ಬೋಧಕೇತರ ವೃಂದ ಭಾಗವಹಿಸಿದ್ದು ಶಿಕ್ಷಕಿ ವೀಣಾ ಸ್ವಾಗತಿಸಿ, ದರ್ಶನ್ ವಂದಿಸಿದರು.