ಮಡಿಕೇರಿ, ಸೆ. ೫: ವೀರಶೈವ ಲಿಂಗಾಯತ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದಂತೆ ಆಗ್ರಹಿಸಿ ರಾಜ್ಯಾದ್ಯಂತ ಏಕಕಾಲದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ನಗರದಲ್ಲೂ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಬೇಡಿಕೆಯ ಈಡೇರಿಕೆಗಾಗಿ ಆಗ್ರಹಿಸಿದರು.
ಈ ಸಂದರ್ಭ ಸಂಘಟನೆಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹೆಸರಿನಲ್ಲಿ ಈಗಾಗಲೇ ರಾಜ್ಯದಲ್ಲಿ ೧.೫ ಲಕ್ಷಕ್ಕೂ ಹೆಚ್ಚು ಜನ ನಕಲಿ ಬೇಡಜಂಗಮರ ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡು ಸರ್ಕಾರಿ ನೌಕರಿ ಮತ್ತು ಸೌಲಭ್ಯಗಳು ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ಅಲ್ಲದೆ ಅನೇಕ ಸಂಘ ಸಂಸ್ಥೆಗಳ ಜನಪ್ರತಿನಿಧಿಗಳು ವಿವಿಧ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯ ಪಡೆದುಕೊಂಡಿದ್ದು, ಇಂತಹ ಸುಳ್ಳು ಪ್ರಮಾಣ ಪತ್ರಗಳ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಪ್ರತಿ ಜಿಲ್ಲೆಯಲ್ಲೂ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕೆಂದು ಒತ್ತಾಯಿಸಿದರು.
ಅಖಿಲ ಕರ್ನಾಟಕ ಡಾ. ಅಂಬೇಡ್ಕರ್ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಸಂಸ್ಥೆಯು ವಿತರಿಸುವ ಬೇಡಜಂಗಮ ಜಾತಿ ಗುರುತಿನ ಚೀಟಿಗಳನ್ನು ಪರಿಗಣಿಸಿ ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡಬಾರದು. ಒಂದು ವೇಳೆ ಪ್ರಮಾಣಪತ್ರವನ್ನು ನೀಡಿದ್ದು ಕಂಡುಬAದಲ್ಲಿ ಅಂತಹ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಣ ಮತ್ತು ಪಡೆದುಕೊಂಡಿದ್ದು, ಇಂತಹ ಸುಳ್ಳು ಪ್ರಮಾಣ ಪತ್ರಗಳ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಪ್ರತಿ ಜಿಲ್ಲೆಯಲ್ಲೂ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕೆಂದು ಒತ್ತಾಯಿಸಿದರು.
ಅಖಿಲ ಕರ್ನಾಟಕ ಡಾ. ಅಂಬೇಡ್ಕರ್ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಸಂಸ್ಥೆಯು ವಿತರಿಸುವ ಬೇಡಜಂಗಮ ಜಾತಿ ಗುರುತಿನ ಚೀಟಿಗಳನ್ನು ಪರಿಗಣಿಸಿ ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡಬಾರದು. ಒಂದು ವೇಳೆ ಪ್ರಮಾಣಪತ್ರವನ್ನು ನೀಡಿದ್ದು ಕಂಡುಬAದಲ್ಲಿ ಅಂತಹ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಣ ಮತ್ತು ಸಂಚಾಲಕಿ ಪವಿತ್ರ ಶಿವಕುಮಾರ್, ಸೋಮವಾರಪೇಟೆ ತಾಲೂಕು ಸಂಚಾಲಕ ಹೆಚ್.ಎ. ನಾಗರಾಜು, ವೀರಾಜಪೇಟೆ ತಾಲೂಕು ಸಂಚಾಲಕ ಹೆಚ್.ಆರ್. ಮನು, ಪ್ರಮುಖರಾದ ಸುಶೀಲಾ ವಿನೋದ್, ಹೆಚ್.ಎಂ. ರೇಖಾ, ಹೆಚ್.ಸಿ. ಭಾನುಮತಿ, ಹೆಚ್.ಹೆಚ್. ಗೌರಮ್ಮ, ರಾಜು ಮೇಧ, ಜಿ. ರಘು ಪಾಲ್ಗೊಂಡಿದ್ದರು. ಬೇಡಿಕೆಯ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಅವರ ಮೂಲಕ ಮುಖ್ಯಮಂತ್ರಿಗಳಿಗೆ ನೀಡಲಾಯಿತು.