ವೀರಾಜಪೇಟೆ, ಸೆ. ೫: ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕ, ಐಕ್ಯೂಎಸಿ ಘಟಕ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನ ಹಾಗೂ ಮತದಾನದ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೀರಾಜಪೇಟೆಯ ತಹಶೀಲ್ದಾರ್ ಡಾ. ಅರ್ಚನಾ ಭಟ್ ಡಿ. ಅವರು ಮಾತನಾಡಿ, ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಮತ್ತು ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಬೇಕೆಂದರು. ಪ್ರಜಾಪ್ರಭುತ್ವ ರಾಷ್ಟçವಾದ ಭಾರತದಲ್ಲಿ ಮತದಾನದ ಹಕ್ಕು ಪ್ರಾಮುಖ್ಯತೆಯನ್ನು ಪಡೆದಿದೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸುವುದು ಎಲ್ಲರ ಕರ್ತವ್ಯ ಎಂದರು.

ಯುವಕರು ಮತದಾನದ ಮಹತ್ವದ ಶಿಕ್ಷಣವನ್ನು ಪಡೆದು ಸಮಾಜವನ್ನು ಜಾಗೃತಗೊಳಿಸಬೇಕು ಎಂದರು. ಮತ್ತೋರ್ವ ಅತಿಥಿಗಳಾದ ಶಿರಸ್ತೇದಾರರಾದ ಗಣೇಶ್ ಕುಮಾರ್ ಅವರು ಮಾತನಾಡಿ, ಮತದಾರರ ಪಟ್ಟಿಗೆ ಹೆಸರು ಸೇರಿಸುವ, ಆಧಾರ್ ಜೋಡಣೆ ಮಾಡುವ ವಿಧಾನಗಳನ್ನು ಸಾಕ್ಷö್ಯಚಿತ್ರಗಳ ಸಮೇತ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅವರು ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.

ಕನ್ನಡ ಉಪನ್ಯಾಸಕಿ ಪ್ರತಿಮಾ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಎನ್.ಎಸ್.ಎಸ್. ಅಧಿಕಾರಿಗಳಾದ ಅರ್ಜುನ್, ಐಕ್ಯೂಎಸಿ ಸಂಚಾಲಕಿ ಹೇಮ ಅವರು ಉಪಸ್ಥಿತರಿದ್ದರು. ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಬಿ.ಎನ್. ಶಾಂತಿಭೂಷಣ್ ಅವರು ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭ ತಾಲೂಕು ಕಚೇರಿಯ ಸಿಬ್ಬಂದಿಗಳು, ಉಪನ್ಯಾಸಕರು ಹಾಜರಿದ್ದರು. ಪದವಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.