ಮಡಿಕೇರಿ, ಸೆ. ೭: ಡಾ. ಬಾಬು ಜಗಜೀವನಾ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ವಿವಿಧ ಕ್ರೀಯಾಯೋಜನೆಗಳಿಗೆ ೨೦೨೨-೨೩ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಲು ತಾ. ೧೫ ರವರೆಗೆ ಅವಧಿ ವಿಸ್ತರಿಸಲಾಗಿದೆ.
ಸೇವಾಸಿಂಧು ಗ್ರಾಮ-೧ ರಲ್ಲಿ ಅರ್ಜಿ ಸಲ್ಲಿಸಿ ನಿಗಮದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ೯೯೪೫೪೪೫೫೫೬ನ್ನು ಸಂಪರ್ಕಿಸಬಹುದು ಎಂದು
ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.