ಮಡಿಕೇರಿ, ಸೆ. ೮: ನಗರದ ಲಾಡ್ಜ್ವೊಂದರಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಮಡಿಕೇರಿಗೆ ಆಗಮಿಸಿ ಶ್ರೀಲಾಡ್ಜ್ನಲ್ಲಿ ತಂಗಿದ್ದ ಮಲ್ಪೆಯ ಶಿವಾನಂದ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಮಂಗಳೂರು ದಕ್ಷಿಣ ವಿಭಾಗದಲ್ಲಿ ಶಿಕ್ಷಣ ಇಲಾಖೆಯ ನೌಕರನಾಗಿದ್ದ ಶಿವಾನಂದ್ ಅವಿವಾಹಿತರಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರ ಸಹೋದರ ಕೃಷ್ಣ ಎಂಬವರು ನೀಡಿದ ದೂರಿನನ್ವಯ ಮಡಿಕೇರಿ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.