ಮಡಿಕೇರಿ, ಸೆ. ೭: ಮೇ. ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ರಾಷ್ಟಿçÃಯ ಕ್ರೀಡಾ ದಿನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿಯಲ್ಲಿ ಆಚರಿಸಲಾಯಿತು.

ಕಾಲೇಜು ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟಿçÃಯ ಕ್ರೀಡಾ ದಿನದಲ್ಲಿ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಡಾ. ನಿರ್ಮಲ ಕೆ.ಡಿ ಅವರು, ಕಾಲೇಜಿನ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಹಾಜರಿದ್ದರು. ಮೇ. ಧ್ಯಾನ್ ಚಂದ್ ಅವರ ಪರಿಚಯವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಡಿಕೇರಿಯ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಎವರೆಸ್ಟ್ ರೊಡ್ರಿಗಸ್ ಅವರು ಪಿಪಿಟಿ ಮೂಲಕ ಪರಿಚಯಿಸಿಕೊಟ್ಟರು.