ಕೂಡಿಗೆ, ಸೆ. ೮: ಬಾಲಕಿಯ ಜೊತೆ ಅನುಚಿತ ವರ್ತನೆ ತೋರಿದ ಆಟೋ ಚಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ತೆರಳುವ ಮಾರ್ಗದ ಹೆಗ್ಗಡಹಳ್ಳಿ ಬಳಿ ಘಟನೆ ನಡೆದಿದ್ದು, ಆರೋಪಿ ಆಟೋ ಚಾಲಕ ಕುಶಾಲನಗರದ ಹೇಮಂತ್ (೨೨) ಎಂಬಾತ ಬಂಧಿತ ಆರೋಪಿ.
ಈ ಸಂಬAಧ ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.