ಚೆಟ್ಟಳ್ಳಿ, ಸೆ. ೮: ಹಿಂದೂ ಮಲಯಾಳಿ ಸಮಾಜ ಚೆನ್ನಯ್ಯನಕೋಟೆ ಸಮಿತಿ ವತಿಯಿಂದ ಮೊದಲನೇ ವರ್ಷದ ಓಣಂ ಆಚರಣೆ ತಾ. ೧೧ ರಂದು ಚೆನ್ನಯ್ಯನಕೋಟೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ ಶಶಿಕುಮಾರ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ ೬ ಗಂಟೆಯಿAದ ೯ ಗಂಟೆಯವರೆಗೆ ಸಮಾಜ ಬಾಂಧವರಿಗೆ ಹೂವಿನ ರಂಗೋಲಿ (ಪೂಕಳಂ) ಸ್ಪರ್ಧೆ ಏರ್ಪಡಿಸಲಾಗಿದೆ. ಬೆಳಗ್ಗೆ ೯ ಗಂಟೆಯಿAದ ಚೆಂಡೆ ವಾದ್ಯಗಳೊಂದಿಗೆ ಮಾವೇಲಿಯನ್ನು ಅಯ್ಯಪ್ಪ ದೇವಸ್ಥಾನದಿಂದ ಶಾಲಾ ಮೈದಾನದವರೆಗೆ ಮೆರವಣಿಗೆ ಮೂಲಕ ಬರ ಮಾಡಿಕೊಳ್ಳಲಾಗುತ್ತದೆ. ನಂತರ ಕ್ರೀಡಾ ಸ್ಪರ್ಧೆಗಳ ಉದ್ಘಾಟನೆ ನಡೆಯಲಿದ್ದು, ಸಾರ್ವಜನಿಕರಿಗೆ ಹಗ್ಗಜಗ್ಗಾಟ ಸ್ಪರ್ಧೆ ಏರ್ಪಡಿಸಲಾಗಿದೆ. ಮಧ್ಯಾಹ್ನ ೧೨.೩೦ ಗಂಟೆಯಿAದ ೨ ಗಂಟೆಯವರೆಗೆ ‘ಓಣಂ ಸದ್ಯ’ ವಿಶೇಷ ಭೋಜನ ನೀಡಲಾಗುತ್ತಿದೆ.ಮಧ್ಯಾಹ್ನ ೨ ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಜಿಲ್ಲಾಧ್ಯಕ್ಷ ವಿ.ಎಂ ವಿಜಯನ್ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಚೆನ್ನಯ್ಯನಕೋಟೆ ಓಣಂ ಆಚರಣಾ ಸಮಿತಿ ಅಧ್ಯಕ್ಷ ವಿಜು ಎಂ.ಎಸ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ ಬೋಪಯ್ಯ, ವಿಧಾನಪರಿಷತ್ ಸದಸ್ಯ ಎಂ.ಪಿ ಸುಜಾ ಕುಶಾಲಪ್ಪ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಹಾಗೂ ಹೈ ಕೋರ್ಟ್ ಹಿರಿಯ ವಕೀಲ ಎ.ಎಸ್ ಪೊನ್ನಣ್ಣ, ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ.ಬಿ ಗಣೇಶ್ ಹಾಗೂ ಜಿಲ್ಲೆಯ ವಿವಿಧ ಭಾಗಗಳ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.