ಸೋಮವಾರಪೇಟೆ, ಸೆ. ೧೦: ಕಳೆದ ಮೂರೂವರೆ ವರ್ಷಗಳ ಕಾಲ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಆರ್. ಗೋವಿಂದರಾಜು ಅವರನ್ನು ವಿವಿಧ ಸಂಘ-ಸAಸ್ಥೆಗಳ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಂದಾಯ, ಸರ್ವೆ ಸೇರಿದಂತೆ ಇನ್ನಿತರ ಇಲಾಖಾ ಅಧಿಕಾ ರಿಗಳು, ಸಿಬ್ಬಂದಿಗಳು ಸನ್ಮಾನಿಸಿದರು.

ಕೊಡ್ಲಿಪೇಟೆ: ಕೊಡ್ಲಿಪೇಟೆ ಹೇಮಾವತಿ ರೋಟರಿ ಸಂಸ್ಥೆ ವತಿಯಿಂದ ಗೋವಿಂದರಾಜ್ ಅವರನ್ನು ಸ್ಥಳೀಯ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯ ಕ್ರಮದಲ್ಲಿ ಹೋಬಳಿ ಕಂದಾಯ ಪರಿವೀಕ್ಷಕ ಮನು ಕುಮಾರ್, ನೌಕರ ಮಾಚಯ್ಯ, ಹೇಮಾವತಿ ರೋಟರಿ ಅಧ್ಯಕ್ಷ ಬಿ.ಕೆ. ಯತೀಶ್, ಮಾಜಿ ಅಧ್ಯಕ್ಷ ಹೆಚ್.ಎಂ. ದಿವಾಕರ್, ಮಾಜಿ ಕಾರ್ಯದರ್ಶಿ ಅಶ್ವತ್‌ಕುಮಾರ್, ಉಮೇಶ್ ಯು.ಹೆಚ್., ಹಾಗೂ ರೋಟರಿ ಸದಸ್ಯರುಗಳು ಉಪಸ್ಥಿತರಿದ್ದರು.

ಆಟೋ ಯೂನಿಯನ್: ಇಲ್ಲಿನ ಆಟೋ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವತಿಯಿಂದ ಸ್ಥಳೀಯ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೋವಿಂದರಾಜು ಅವರನ್ನು ಸನ್ಮಾನಿಸಲಾಯಿತು. ಕಾರ್ಯ ಕ್ರಮದಲ್ಲಿ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ಅವರು ಆಟೋ ಚಾಲಕರಿಗೆ ಕಾನೂನಿನ ಅರಿವು ಮೂಡಿಸಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಹೆಚ್.ಕೆ. ಗಂಗಾಧರ್ ವಹಿಸಿದ್ದರು. ಠಾಣಾಧಿಕಾರಿ ರಮೇಶ್ ಕುಮಾರ್, ಆಟೋ ಯೂನಿ ಯನ್‌ನ ಗೌರವಾಧ್ಯಕ್ಷ ಶಶಿಧರ್, ಕಾರ್ಯದರ್ಶಿ ಜನಾರ್ಧನ್, ಉಪಾಧ್ಯಕ್ಷ ಕರೀಂ, ಮಾಜಿ ಅಧ್ಯಕ್ಷ ಮೋಹನ್ ಹಾಗೂ ಇತರರು ಉಪಸ್ಥಿತರಿದ್ದರು.