ಗೋಣಿಕೋಪ್ಪಲು, ಸೆ. ೧೦: ಹೈನುಗಾರಿಕೆ ಹಾಗೂ ಜೇನು ಸಾಕಾಣಿಕೆಯಿಂದ ರೈತರು ಆರ್ಥಿಕವಾಗಿ ಸದೃಢಗೊಳ್ಳಬಹುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಪಂಚಾಯಿತಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕೊಡಗು ಜಿಲ್ಲೆ ಅರಣ್ಯ ಮಹಾವಿದ್ಯಾಲಯ ಪೊನ್ನಂಪೇಟೆ ರಾಷ್ಟಿçÃಯ ಜಾನುವಾರು ಮಿಷನ್ ಅಡಿ ಅಜಾದಿಕ ಅಮೃತ್ ಮಹೋತ್ಸವ ಅಂಗವಾಗಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಪಶುಪಾಲನ ಹಾಗೂ ಪಶುವೈದ್ಯಕೀಯ ಸೇವೆ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟಿçÃಯ ಜಾನುವಾರು ಮಿಷನ್ ಯೋಜನೆ ಅಡಿ ವೈಜ್ಞಾನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರ್ಥಿಕ ಪಶುಪಾಲನೆ ಚಟುವಟಿಕೆ ಮತ್ತು ಜೇನು ಸಾಕಾಣೆ ಒಂದು ದಿನದ ಜಿಲ್ಲಾಮಟ್ಟದ ಕಾರ್ಯಕ್ರಮದ ವಿಷಯ ತಜ್ಞರಾಗಿ ಆಗಮಿಸಿದ್ದ ಡಾ. ಸಿದ್ದರಾಮಣ್ಣ, ಡಾ. ಚಂದ್ರಶೇಖರ್, ಡಾ. ಕೆಂಚರೆಡ್ಡಿ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದ ಇನ್ನೂರಕ್ಕೂ ಅಧಿಕ ರೈತರಿಗೆ ಪಶು ಸಂಗೋಪನೆ ಹಾಗೂ ಜೇನು ಕೃಷಿಯ ಬಗ್ಗೆ ಉಪಯುಕ್ತ ಮಾಹಿತಿ ಹಾಗೂ ಸರ್ಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಒದಗಿಸಿದರು.

ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಬೊಟ್ಟಂಗಡ ದಶಮಿ ಹೂವಿನ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಕೃಷಿಕ ಸಮಾಜದ ಸದಸ್ಯರಾದ ಅರುಣ್ ಭೀಮಯ್ಯ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಹಿರಿಯ ವೈದ್ಯ, ಪಶು ವೈದ್ಯಾಧಿಕಾರಿ ಡಾ. ಶಾಂತೇಶ್ ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.