ಕೂಡಿಗೆ, ಸೆ. ೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಸಂಗೊಳ್ಳಿ ರಾಯಣ್ಣ ಕುರುಬರ ಹಿತ ರಕ್ಷಣಾ ವೇದಿಕೆ ಜಾಗದಲ್ಲಿ ಸಮುದಾಯದ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ಅನುದಾನವನ್ನು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭರವಸೆ ನೀಡಿರುತ್ತಾರೆ.

ಜಿಲ್ಲಾ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪ್ರಭಾಕರ್ ನವರ ನೇತೃತ್ವದಲ್ಲಿ ತಂಡ ಶಾಸಕರನ್ನು ಭೇಟಿ ಮಾಡಿದಾಗ ಈಗಾಗಲೇ ಭುವನಗಿರಿ ಗ್ರಾಮದಲ್ಲಿ ಕಾಯ್ದಿರಿಸುವ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆಯ ಜಾಗಕ್ಕೆ ಮೊದಲ ಹಂತವಾಗಿ ೨ ಲಕ್ಷ ರೂಗಳನ್ನು ಸಮುದಾಯದ ಕಟ್ಟಡದ ನಿರ್ಮಾಣಕ್ಕೆ ನೀಡುವುದಾಗಿ ಭರವಸೆ ನೀಡಿದರು. ಅಲ್ಲದೆ ಕಳೆದ ಸಂಗೊಳ್ಳಿ ರಾಯಣ್ಣ ಜಯಂತಿ ದಿನದಂದು ತಿಳಿಸಿದ ರೀತಿ ಸಮುದಾಯದ ಅಭಿವೃದ್ಧಿಗೆ ಪೂರಕವಾದ ಯೋಜನೆ ಗಳನ್ನು ಕಾರ್ಯಗತಗೊಳಿಸ ಲಾಗುವುದು. ಗಿರಿಜನ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ಹಂತ ಹಂತವಾಗಿ ಕಟ್ಟಡ ನಿರ್ಮಾಣ ಹೆಚ್ಚು ಅನುದಾನವನ್ನು ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಪ್ರಭಾಕರ್, ಉಪಾಧ್ಯಕ್ಷ ಪುಟ್ಟಸ್ವಾಮಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಡಿ.ಎಸ್. ಗಣೇಶ್, ಚಿಕ್ಕಯ್ಯ, ಸೋಮವಾರಪೇಟೆ ತಾಲೂಕು ಸಮುದಾಯದ ಅಭಿವೃದ್ಧಿಗೆ ಪೂರಕವಾದ ಯೋಜನೆ ಗಳನ್ನು ಕಾರ್ಯಗತಗೊಳಿಸ ಲಾಗುವುದು. ಗಿರಿಜನ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ಹಂತ ಹಂತವಾಗಿ ಕಟ್ಟಡ ನಿರ್ಮಾಣ ಹೆಚ್ಚು ಅನುದಾನವನ್ನು ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಪ್ರಭಾಕರ್, ಉಪಾಧ್ಯಕ್ಷ ಪುಟ್ಟಸ್ವಾಮಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಡಿ.ಎಸ್. ಗಣೇಶ್, ಚಿಕ್ಕಯ್ಯ, ಸೋಮವಾರಪೇಟೆ ತಾಲೂಕು ಟಿ.ಜಿ. ಸಂತೋಷ್, ಲೋಕೇಶ್, ಅಳುವಾರ ರಾಜು, ನಟೇಶ್ ಸೋಮಣ್ಣ, ಹಿತ್ತಲಕೇರಿ ಪ್ರವೀಣ್, ಮಹದೇವ್ ಸೇರಿದಂತೆ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ಪದಾಧಿಕಾರಿಗಳು ಹಾಜರಿದ್ದರು.