ಮಡಿಕೇರಿ, ಸೆ. ೧೧: ಅರಣ್ಯ ಸಂಪತ್ತು ಹಾಗೂ ಜೀವ ಸಂಕುಲಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಸೇವೆ ಸಲ್ಲಿಸುತ್ತಿದ್ದಾರೆ ಎಂದು ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರಂಜನ ಮೂರ್ತಿ ಹೇಳಿದರು.

ನಗರದ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ನಡೆದ ‘ರಾಷ್ಟಿçÃಯ ಅರಣ್ಯ ಹುತಾತ್ಮರ ದಿನಾಚರಣೆ’ಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಹೆಚ್ಚಿನ ಹೊಣೆ ಗಾರಿಕೆ ಜೊತೆಗೆ ಕಠಿಣ ಸವಾಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾರ್ವಜನಿಕರ ಜೊತೆ ಉತ್ತಮ ಒಡನಾಟ ಹೊಂದಿ ಅರಣ್ಯ ರಕ್ಷಣೆ ಮಾಡುವತ್ತ ವಿಶೇಷ ಗಮನ ಹರಿಸುತ್ತಾರೆ ಎಂದರು.

ದೇಶದ ರಕ್ಷಣೆ , ಅರಣ್ಯ ಸಂರಕ್ಷಣೆ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಸೈನಿಕರು, ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸಮವಸ್ತç ಧರಿಸಿ ಕಾರ್ಯ ನಿರ್ವಹಿಸುತ್ತಾರೆ. ಈ ಮೂರು ಕ್ಷೇತ್ರದಲ್ಲಿಯೂ ಸಮಾಜದ ರಕ್ಷಣೆ, ಹೊಣೆಗಾರಿಕೆ ಹೆಚ್ಚಿನದ್ದಾಗಿದೆ ಎಂದು ನಿರಂಜನ ಮೂರ್ತಿ ಅವರು ನುಡಿದರು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿ, ಅರಣ್ಯ ಸಂರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಪ್ರಸ್ತುತ ದಿನದಲ್ಲಿ ಅರಣ್ಯದ ಮಹತ್ವ ಪ್ರತಿಯೊಬ್ಬರಿಗೂ ತಿಳಿದಿದೆ. ಸರಿಯಾದ ಸಮಯಕ್ಕೆ ಮಳೆ ಬರಬೇಕಾದರೆ ಕಾಡಿನ ಅವಶ್ಯಕತೆ ಬಹಳ ಮುಖ್ಯ ಎಂದರು.

ಉತ್ತಮ ಮಳೆಯಾದರೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳ ಬಹುದು. ಕುಡಿಯಲು ನೀರು ಹಾಗೂ ಶುದ್ಧ ಗಾಳಿ ಪ್ರತಿಯೊಬ್ಬರಿಗೂ ಪರಿಸರದಿಂದ ಸಿಗುತ್ತದೆ. ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆಯಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ಮಾತನಾಡಿ, ಅರಣ್ಯ ಸಂಪತ್ತಿನ ರಕ್ಷಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯವರ ಕಾರ್ಯವೈಖರಿ ಪ್ರಸಂಶನೀಯ. ಅರಣ್ಯ ಇಲಾಖೆ ಅವರ ಕಾರ್ಯ ವೈಖರಿಯನ್ನು

(ಮೊದಲ ಪುಟದಿಂದ) ಪ್ರತಿಯೊಬ್ಬರೂ ಅರಿಯಬೇಕು ಎಂದರು.

ಜಿ.ಪA. ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ, ಅರಣ್ಯ ಸಂರಕ್ಷಣೆಗಾಗಿ ಪ್ರಾಣತ್ಯಾಗ ಮಾಡಿದ ವರನ್ನು ನೆನೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಮಾತನಾಡಿ, ಅರಣ್ಯ ಇಲಾಖೆ ಅರಣ್ಯ, ಜೀವ ಸಂಕುಲ ಹಾಗೂ ಮನು ಸಂಕುಲಗಳ ರಕ್ಷಣೆ ಮಾಡುತ್ತಿದೆ. ಉಸಿರಾಡುವ ಗಾಳಿ ಹಾಗೂ ಕುಡಿಯುವ ನೀರಿನ ಮೂಲವೇ ಅರಣ್ಯವಾಗಿದೆ. ಅರಣ್ಯದ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಯವರು ಮುಂಚೂಣಿಯಲ್ಲಿದ್ದಾರೆ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್ ಮಾತನಾಡಿದರು.

ಕಾರ್ಯಕ್ರಮಕ್ಕೂ ಮೊದಲು ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರಂಜನ ಮೂರ್ತಿ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ. ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಮಡಿಕೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು ಇತರರು 'ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ, ಗೌರವ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಇಲಾಖೆ ವಾದ್ಯ ತಂಡ ಇತರರು ಇದ್ದರು.