ನಾಪೋಕ್ಲು, ಸೆ. ೧೦: ಇಲ್ಲಿಗೆ ಸಮೀಪದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಹಝ್ರತ್ ಸೂಫಿ ಶಹೀದ್ ಮತ್ತು ಸಯ್ಯಿದ್ ಹಸನ್ ಸಖಾಫ್ ಅಲ್ ಹಳ್ರಮಿ ಹಾಗೂ ಇಲ್ಲಿ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ ಪ್ರತೀ ವರ್ಷವು ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ೨೦೨೩ನೇ ಫೆಬ್ರವರಿ ೨೪ ರಿಂದ ಮಾರ್ಚ್ ೩ ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.