ಎಐಸಿಸಿ ಚುನಾವಣೆ-ನಿಯಮಗಳಲ್ಲಿ ಬದಲಾವಣೆ
ನವದೆಹಲಿ, ಸೆ. ೧೧: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆ ಚುನಾವಣೆಗೆ ದಿನಗಣನೆ ಆರಂಭವಾಗಿರುವAತೆಯೇ ದಿಢೀರ್ ಬೆಳವಣಿಗೆಯಲ್ಲಿ ಪಕ್ಷದ ಹೈ ಕಮಾಂಡ್ ಮತದಾನದ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಮುಂದಿನ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಮಹತ್ವದ ಚುನಾವಣೆ ನಡೆಯಲಿದ್ದು, ಹಿರಿಯ ನಾಯಕರ ಒತ್ತಾಯದ ಮೇರೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲು ಪಕ್ಷದ ನಾಯಕತ್ವ ಒಪ್ಪಿಗೆ ನೀಡಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಬಯಸುವ ಯಾರಾದರೂ ಚುನಾವಣಾ ಸಮಿತಿ ರೂಪಿಸುವ ಎಲ್ಲಾ ೯,೦೦೦ ಪ್ರತಿನಿಧಿಗಳ ಪಟ್ಟಿಯನ್ನು ನೋಡಲು ಸಾಧ್ಯವಾಗುತ್ತದೆ. ಈ ಪಟ್ಟಿಯು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಕಚೇರಿಯಲ್ಲಿ ಸೆಪ್ಟೆಂಬರ್ ೨೦ ರಿಂದ ಲಭ್ಯವಿರುತ್ತದೆ ಎಂದು ಕಾಂಗ್ರೆಸ್ ನಾಯಕ ಮಧುಸೂದನ್ ಮಿಸ್ತಿç ಹೇಳಿದ್ದಾರೆ. ಶಶಿ ತರೂರ್, ಕಾರ್ತಿ ಚಿದಂಬರA ಮತ್ತು ಮನೀಶ್ ತಿವಾರಿ ಸೇರಿದಂತೆ ಐವರು ಸಂಸದರು ಮಿಸ್ತಿç ಅವರಿಗೆ ಪತ್ರ ಬರೆದ ನಂತರ ಚುನಾವಣಾ ಪ್ರಕ್ರಿಯೆಯಲ್ಲಿ ‘ಪಾರದರ್ಶಕತೆ, ನ್ಯಾಯಸಮ್ಮತತೆ'ಯನ್ನು ಟೀಕಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಅಕ್ಟೋಬರ್ ೧೭ ರಂದು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ ೨೪ ರಿಂದ ೩೦ ರವರೆಗೆ ನಾಮಪತ್ರ ಸಲ್ಲಿಸಬಹುದು. ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರು ತಮ್ಮ ರಾಜ್ಯದ ೧೦ ಪ್ರತಿನಿಧಿಗಳ ಹೆಸರನ್ನು ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ಪರಿಶೀಲಿಸಬಹುದು ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಮಿಸ್ತಿç ಹೇಳಿದ್ದಾರೆ. ನಾಮಪತ್ರಕ್ಕೆ ಸಹಿ ಹಾಕಿ ಮುಖ್ಯ ಚುನಾವಣಾಧಿಕಾರಿಗೆ ನೀಡಿದ ಬಳಿಕ ಪ್ರತಿನಿಧಿಗಳ ಸಂಪೂರ್ಣ ಪಟ್ಟಿ ಸಿಗಲಿದೆ ಎಂದು ಸಂಸದರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಬಸ್‌ಗಳ ಖರೀದಿಯಲ್ಲಿ ಭ್ರಷ್ಟಾಚಾರ ; ಸಿಬಿಐ ತನಿಖೆಗೆ ಅನುಮೋದನೆ
ನವದೆಹಲಿ, ಸೆ. ೧೧: ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ನಂತರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಡಿಟಿಸಿಯಿಂದ ೧,೦೦೦ ಲೋ ಫ್ಲೋರ್ ಬಸ್‌ಗಳ ಖರೀದಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಗೆ ನಡೆಸಲು ಅನುಮೋದಿಸಿದ್ದಾರೆ. ಈ ವರ್ಷ ಜೂನ್ ೯ ರಂದು ರಾಜ್ಯಪಾಲ ವಿಕೆ ಸಕ್ಸೇನಾ ಬಂದ ದೂರಿನಲ್ಲಿ, ದೆಹಲಿ ಸಾರಿಗೆ ಸಂಸ್ಥೆ (ಡಿಟಿಸಿ) ಸಾರಿಗೆ ಸಚಿವರನ್ನು ಪೂರ್ವಯೋಜಿತವಾಗಿ ಟೆಂಡರ್ ಮತ್ತು ಖರೀದಿಗೆ ಸಂಬAಧಿಸಿದ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿದೆ ಎಂದು ಆರೋಪಿಸಲಾಗಿದೆ. ಟೆಂಡರ್‌ಗೆ ಬಿಡ್ ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್ ಆಗಿ ಡಿಐಎಂಟಿಎಸ್‌ನ ನೇಮಕವನ್ನು ಅಕ್ರಮಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಪ್ರಾಪ್ರೆ ಮೇಲೆ ಸಾಮೂಹಿಕ ಅತ್ಯಾಚಾರ
ಲಖೀಂಪುರ ಖೇರಿ, ಸೆ. ೧೧: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬAಧಿಸಿದAತೆ ಐವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಸಂತ್ರಸ್ತೆ ತನ್ನ ಮನೆಗೆ ಬಂದು ನಡೆದ ಘಟನೆಯನ್ನು ಪೋಷಕರಿಗೆ ತಿಳಿಸಿದ್ದು ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಮೊಹಮ್ಮದಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಸಿಂಗ್ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಾಲಕಿಯ ಸಹೋದರ ಅದೇ ಗ್ರಾಮದ ಐವರನ್ನು ಹೆಸರಿಸಿ ಪೊಲೀಸರಿಗೆ ದೂರು ನೀಡಿದ್ದು, ಅವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದರು. ಶನಿವಾರ ತಡರಾತ್ರಿ ಮೊಹಮ್ಮದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಮೇಲಿನ ಅತ್ಯಾಚಾರದ ಬಗ್ಗೆ ಮಾಹಿತಿ ಸಿಕ್ಕಿತ್ತು. ಶೀಘ್ರವಾಗಿ ಕಾರ್ಯನಿರ್ವಹಿಸಿದ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು ಎಂದು ಸಿಂಗ್ ಹೇಳಿದರು. ಮ್ಯಾಜಿಸ್ಟೆçÃಟ್ ಮುಂದೆ ತನ್ನ ಹೇಳಿಕೆಗಳಲ್ಲಿ, ಹುಡುಗಿ ತನ್ನ ಗ್ರಾಮದವರಾದ ಮತ್ತು ಈ ಹಿಂದೆ ತನಗೆ ಪರಿಚಯವಿದ್ದ ನಾಲ್ವರು ಆರೋಪಿಗಳ ಗುರುತನ್ನು ಬಹಿರಂಗಪಡಿಸಿದಳು ಎಂದು ಅಧಿಕಾರಿ ಹೇಳಿದರು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪೋಕ್ಸೊ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಸ್‌ಐಐಗೆ ರೂ. ೧ ಕೋಟಿ ವಂಚನೆ
ಮುAಬೈ, ಸೆ. ೧೧:ಕೆಲವು ಅನಾಮಿಕ ದುಷ್ಕರ್ಮಿಗಳು ಅದಾರ್ ಪೂನಾವಾಲ ಹೆಸರಿನಲ್ಲಿ ಲಸಿಕೆ ತಯಾರಿಕಾ ಸಂಸ್ಥೆ ಸೆರಮ್ ಇನ್ಸಿ÷್ಟಟ್ಯೂಟ್ ಆಫ್ ಇಂಡಿಯಾಗೆ ೧ ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಕರಣ ದಾಖಲಿಸಲಾಗಿದೆ. ವಂಚಕರು ಸಂಸ್ಥೆಯ ಸಿಇಒ ಅದಾರ್ ಪೂನಾವಾಲ ಹೆಸರಿನಲ್ಲೇ ವಂಚನೆ ಮಾಡಿದ್ದು, ಸಂಸ್ಥೆಯ ನಿರ್ದೇಶಕರ ಪೈಕಿ ಓರ್ವರಾಗಿರುವ ಸತೀಶ್ ದೇಶಪಾಂಡೆ ಎಂಬವರಿಗೆ ಪೂನಾವಾಲ ಸೋಗಿನಲ್ಲಿದ್ದ ವ್ಯಕ್ತಿ ವಾಟ್ಸ್ ಆಪ್ ಮೆಸೇಜ್ ಕಳಿಸಿ ವಿವಿಧ ಬ್ಯಾಂಕ್ ಖಾತೆಗಳಿಗೆ ತಕ್ಷಣವೇ ಹಣ ವರ್ಗಾವಣೆ ಮಾಡುವಂತೆ ಸೂಚಿಸಿದ್ದಾರೆ. ಮೆಸೇಜ್‌ಗಳು ಪೂನಾವಾಲ ಅವರದ್ದೇ ಎಂದು ನಂಬಿದ ಸತೀಶ್ ದೇಶಪಾಂಡೆ, ವಿವಿಧ ಬ್ಯಾಂಕ್ ಖಾತೆಗಳಿಗೆ ಹಲವು ವಹಿವಾಟುಗಳಲ್ಲಿ ೧,೦೧,೦೧,೫೫೪ ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆ ಬಳಿಕ ಮೋಸ ಹೋಗಿರುವುದು ಗೊತ್ತಾಗಿದೆ. ಅದಾರ್ ಪೂನಾವಾಲ ಈ ರೀತಿಯ ಯಾವುದೇ ಮೆಸೇಜ್‌ಗಳನ್ನೂ ಕಳಿಸಲಿಲ್ಲ ಎಂಬದು ದೃಢವಾಗುತ್ತಿದ್ದಂತೆಯೇ ಹಣಕಾಸು ವಿಭಾಗದ ಮ್ಯಾನೇಜರ್ ಪೊಲೀಸರಿಗೆ ದೂರು ನೀಡಿದ್ದು ಐಪಿಸಿ ಸೆಕ್ಷನ್ ೪೧೯, ೪೨೦, ೩೪ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.
ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಪುನಃ ಸ್ಥಾಪಿಸಲು ಸಾಧ್ಯವಿಲ್ಲ
ಶ್ರೀನಗರ, ಸೆ. ೧೧: ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚಿನ ಸ್ವಾಯತ್ತತೆಯನ್ನು ನೀಡಿದ್ದ ಸಂವಿಧಾನದ ೩೭೦ನೇ ವಿಧಿಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎರಡು ವರ್ಷಗಳ ಹಿಂದೆ ಹಿಂತೆಗೆದುಕೊAಡಿದೆ. ಅದನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ತಮ್ಮ ಮೊದಲ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಆಜಾದ್, ಆರ್ಟಿಕಲ್ ೩೭೦ರ ಪುನಃ ಸ್ಥಾಪನೆಗೆ ಒತ್ತಾಯಿಸುವುದಾಗಿ ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿರುವ ಪ್ರಾದೇಶಿಕ ಪಕ್ಷಗಳನ್ನು ಗುರಿಯಾಗಿಸಿದರು. ಗುಲಾಂ ನಬಿ ಆಜಾದ್ ಯಾರನ್ನೂ ದಾರಿ ತಪ್ಪಿಸುವುದಿಲ್ಲ. ಮತಕ್ಕಾಗಿ, ನಾನು ನಿಮ್ಮನ್ನು ದಾರಿ ತಪ್ಪಿಸುವುದಿಲ್ಲ ಮತ್ತು ಶೋಷಣೆ ಮಾಡುವುದಿಲ್ಲ. ದಯವಿಟ್ಟು ಸಾಧಿಸಲು ಸಾಧ್ಯವಾಗದ ಸಮಸ್ಯೆಗಳನ್ನು ಕೆದಕಬೇಡಿ. ೩೭೦ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ. ಸಂಸತ್ತಿನಲ್ಲಿ ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಆಜಾದ್ ತಿಳಿಸಿದರು. ಪ್ರತಿ ಚುನಾವಣೆಯಲ್ಲೂ ಕಾಂಗ್ರೆಸ್ ಕೆಳಗಿಳಿಯುತ್ತಿದೆ. ಸಂಸತ್ತಿನಲ್ಲಿ ಬಹುಮತ ಪಡೆಯುವ ಮತ್ತು ೩೭೦ ನೇ ವಿಧಿಯನ್ನು ಮರುಸ್ಥಾಪಿಸುವ ಯಾವುದೇ ಪಕ್ಷವು ಭಾರತದಲ್ಲಿ ಇಲ್ಲ. ಶೋಷಣೆ ಮತ್ತು ಸುಳ್ಳಿನ ರಾಜಕೀಯದ ವಿರುದ್ಧ ಹೋರಾಡಲು ಮುಂದಿನ ೧೦ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ತನ್ನ ಪಕ್ಷವನ್ನು ಪ್ರಾರಂಭಿಸುವುದಾಗಿ ಎಂದು ಅವರು ಹೇಳಿದರು.
ನೂತನ ರಾಷ್ಟಿçÃಯ ಪಕ್ಷ ಸ್ಥಾಪನೆ-ಚಂದ್ರಶೇಖರ ರಾವ್
ಹೈದ್ರಾಬಾದ್, ಸೆ. ೧೧: ಶೀಘ್ರದಲ್ಲಿಯೇ ನೂತನ ರಾಷ್ಟಿçÃಯ ಪಕ್ಷ ಸ್ಥಾಪಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಭಾನುವಾರ ಸ್ಪಷ್ಟಪಡಿಸಿದ್ದು, ಈ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ತೆಲಂಗಾಣ ಚಳವಳಿ ಆರಂಭಕ್ಕೂ ಮುನ್ನ ನಾವು ಮಾಡಿದಂತೆ ಬುದ್ಧಿಜೀವಿಗಳು, ಅರ್ಥಶಾಸ್ತçಜ್ಞರು ಮತ್ತು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸುದೀರ್ಘ ಚರ್ಚೆಯ ನಂತರ ಪರ್ಯಾಯ ರಾಷ್ಟ್ರೀಯ ಪಕ್ಷ ಕಾರ್ಯಸೂಚಿಯಲ್ಲಿ ಒಮ್ಮತವಿದೆ' ಎಂದು ರಾವ್ ಅವರ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ. ಅತಿ ಶೀಘ್ರದಲ್ಲಿಯೇ ರಾಷ್ಟಿçÃಯ ಪಕ್ಷ ಸ್ಥಾಪಿಸಲಾಗುವುದು ಮತ್ತು ಅದರ ನೀತಿ ರೂಪಣೆ ಕೆಲಸ ನಡೆಯುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.