ಮಡಿಕೇರಿ, ಸೆ. ೧೦: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚೇರಂಬಾಣೆಯಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್ಸ್, ಬುಲ್ ಬುಲ್ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆ ಏರ್ಪಡಿಸಲಾಗಿತ್ತು

ಕಾರ್ಯಕ್ರಮವನ್ನು ಭಾಗಮಂಡಲದ ಕಾವೇರಿ ಕಾಲೇಜಿನ ಪ್ರಾಂಶುಪಾಲ ದಿವಾಕರ್ ಕೆ.ಜೆ. ಉದ್ಘಾಟಿಸಿ, ಪ್ರತಿಯೊಬ್ಬರು ನಮ್ಮ ದೇಶವನ್ನು ಪ್ರೀತಿಸಬೇಕು ಹಾಗೂ ಗೌರವಿಸಬೇಕು. ನಾವು ಭಾರತೀಯರು ಎಂದು ಹೆಮ್ಮೆಯಿಂದ ಹೇಳಿಕೊಳ್ಳಬೇಕು ಎಂದರು.

ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಪಾಜೆ ಘಟಕದ ಅಧ್ಯಕ್ಷ ಧನಂಜಯ ಎಂ ವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಮಿಲನ್ ಮುತ್ತಣ್ಣ, ಬೇಂಗೂರು ಗ್ರಾಮ ಪಂಚಾಯ್ತಿ ಸದಸ್ಯರು, ಇವರು ಕಾರ್ಯಕ್ರಮಕ್ಕೆ ಸಹಕಾರ ನೀಡುವುದರೊಂದಿಗೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಶಾಂತ ಡಿ.ಕೆ. ತಮ್ಮ ಶಾಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಉತ್ತಮ ಸ್ಪಧೆೆð ನೀಡುವಂತೆ ಕಿವಿಮಾತು ಹೇಳಿದರು.

ಸ್ಪರ್ಧೆಯಲ್ಲಿ ಸಂಪಾಜೆ ವ್ಯಾಪ್ತಿಗೆ ಒಳಪಟ್ಟ ೧೧ ಶಾಲೆಗಳ ೮೫ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಣ್ಣಪ್ಪ ಬಿ.ಎಂ., ಜಿಲ್ಲಾ ಸಂಘಟಕಿ ದಮಯಂತಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಶ್ರೀಧರ್ ಎ. ಎಸ್., ಸ್ಕೌಟ್ಸ್ ಮಾಸ್ಟರ್ ಹಾಗೂ ತರಬೇತಿ ಸಹಾಯಕ ನಾಯಕ ರಂಜಿತ್ ಕೆ.ಯು ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು.

ಬಂಡೆಪ್ಪ ಎಸ್. ಕೋಟಾಲೆ ಸಂಗೀತ ಶಿಕ್ಷಕರು ಮತ್ತು ರೋಹಿಣಿ ಎ.ಯು. ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ವಿಭಾಗವಾರು ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಕಾರ್ಯದರ್ಶಿ ಉಷಾರಾಣಿ ಕೆ.ಬಿ. ಸ್ವಾಗತಿಸಿ, ನಿರೂಪಿಸಿ, ಸಹಕಾರ್ಯದರ್ಶಿ ಲಲಿತಾ ಬಿ.ಕೆ. ವಂದಿಸಿದರು.