ಕೂಡಿಗೆ, ಸೆ. ೧೦: ಹೆಬ್ಬಾಲೆ ಗ್ರಾಮ ಪಂಚಾಯಿತಿಯ ಎಂಟು ಲಕ್ಷ ರೂ ಅನುದಾನದಲ್ಲಿ ನಿರ್ಮಾಣಗೊಳಿಸಲಾಗಿದ್ದ ಕುಡಿಯುವ ನೀರಿನ ಬೃಹತ್ ಟ್ಯಾಂಕ್ ಅನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟನೆ ನೆರವೇರಿಸಿದರು.

ಈಗಾಗಲೇ ಜಲ ಜೀವನ್ ಯೋಜನೆಯ ಅಡಿಯಲ್ಲಿ ಹೆಬ್ಬಾಲೆಯಿಂದ ಮುಳ್ಳುಸೋಗೆ ಮತ್ತು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಮನೆ ಮನೆಗೆ ನೀರು ಒದಗಿಸುವ ಯೋಜನೆಗಳನ್ನು ಇಲಾಖೆಯ ಮೂಲಕ ಕೈಗೊಳ್ಳಲಾಗಿದೆ. ಅದರಂತೆ ಹೆಬ್ಬಾಲೆಯಲ್ಲಿ ಹೆಚ್ಚುವರಿಯಾಗಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮತ್ತು ಹಳೆಯ ಟ್ಯಾಂಕ್ ನವೀಕರಣ ಕಾರ್ಯವು ನಡೆದಿದೆ, ಅದರ ಮೂಲಕ ಈ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಟ್ಯಾಂಕ್ ನಿರ್ಮಾಣ ಮಾಡಲಾಗಿದೆ. ಅದರಂತೆ ನೀರನ್ನು ಒದಗಿಸುವ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಶಾಸಕರು ಹೇಳಿದರು.

ಈ ಸಂದರ್ಭದಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ, ಉಪಾಧ್ಯಕ್ಷೆ ಅರುಣ್ ಕುಮಾರಿ, ಸದಸ್ಯರಾದ ಮಹದೇವ, ಪರಮೇಶ್, ಚಂದ್ರಶೇಖರ ಜೋಗಿ, ಕವಿತ, ರತ್ನಮ್ಮ, ಪವಿತ್ರ, ಪುಟ್ಟಲಕ್ಷಮ್ಮ ಲತಾ, ಯಶಸ್ಸಿನಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್, ಆರ್, ಶ್ರೀನಿವಾಸ, ಕೂಡು ಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಸ್ಕರ್ ನಾಯಕ್, ಅಭಿವೃದ್ಧಿ ಅಧಿಕಾರಿ ಎಂ, ಅರುಣ್ ಬಾಸ್ಕರ್, ಶಾಸಕರ ಆಪ್ತ ಕಾರ್ಯದರ್ಶಿ ರವಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು