ಸೋಮವಾರಪೇಟೆ, ಸೆ. ೧೧: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಿದಂತೆ ಸೋಮವಾರಪೇಟೆ ತಾಲೂಕಿನ ಮಾದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಂಬೂರು ಗ್ರಾಮದ ಕಾರ್ಯಪ್ಪ ಬಡಾವಣೆಯಲ್ಲಿ ಹೊಸ ಅಂಗನವಾಡಿ ಕೇಂದ್ರ ಆರಂಭಕ್ಕೆ ಅಧಿಕಾರಿಗಳು ಸ್ಥಳ ಪರಿಶೀಲಿಸಿದರು.

ಈಗಾಗಲೇ ಮಕ್ಕಳು ಇದ್ದ ಜಾರುಕೊಲ್ಲಿ ಮಿನಿ ಅಂಗನವಾಡಿ ಕೇಂದ್ರವನ್ನು ಕಾರ್ಯಪ್ಪ ಬಡಾವಣೆಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆ ಮನೆ ನಂಬರ್ ೬೨ ಅನ್ನು ಪರಿಶೀಲಿಸಿದ ತಹಶೀಲ್ದಾರ್ ನರಗುಂದ್ ಅವರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಯ್ಯ ಅವರಿಗೆ ಅಂಗನವಾಡಿ ಆರಂಭಿಸಲು ಮನೆಯನ್ನು ಹಸ್ತಾಂತರಿಸಿದರು ತಾ. ೧೨ರಿಂದ (ಇಂದಿನಿAದ) ಅಂಗನವಾಡಿ ಆರಂಭ ಆಗಲಿದೆ ಎಂದು ಅಣ್ಣಯ್ಯ ತಿಳಿಸಿದರು. ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್. ಮಂಜುನಾಥ್ ಸೇರಿದಂತೆ ಕಂದಾಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.