ಮುಳ್ಳೂರು, ಸೆ. ೧೧: ವಿದ್ಯಾರ್ಥಿಗಳು ನೈತಿಕತೆ, ಜ್ಞಾನವಂತಿಕೆ ಮತ್ತು ಆತ್ಮವಿಶ್ವಾಸ ಈ ಮೂರು ಮನೋಭಾವನೆಯನ್ನು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಸಾಧನೆಯ ಗೆಲವು ಖಚಿತವಾಗುತ್ತದೆ ಎಂದು ಆಲೂರು-ಸಿದ್ದಾಪುರ ಸರಕಾರಿ ಪ.ಪೂ. ಕಾಲೇಜಿನ ಹಿರಿಯ ಉಪನ್ಯಾಸಕ ಗಣಪತಿ ಭಟ್ ಅಭಿಪ್ರಾಯಪಟ್ಟರು. ಅವರು ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ಕಿರಿಯ ವಿದ್ಯಾರ್ಥಿಗಳು ಅಂತಿಮ ಪದವಿ ಹಿರಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಓದಿನ ಸತತ ಪ್ರಯತ್ನ, ಆಸಕ್ತಿ ಇದ್ದಲ್ಲಿ ವಿದ್ಯಾರ್ಥಿಗಳು ಗೆಲುವು ಸಾಧಿಸಬಹುದು, ವಿದ್ಯಾರ್ಥಿ ದಿಸೆಯಲ್ಲಿ ಪುಸ್ತಕವನ್ನು ತಲೆ ತಗ್ಗಿಸಿ ಓದಿ ಅಭ್ಯಾಸ ನಡೆಸಿದರೆ ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ತಲೆಎತ್ತಿ ನಡೆಯಬಹುದು ಎಂದರು.

ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಹರೀಶ್ ಮಾತನಾಡಿ-ವಿದ್ಯಾರ್ಥಿಗಳು ಪದವಿ ಶಿಕ್ಷಣವನ್ನು ಕೇವಲ ಸರ್ಟಿಫಿಕೆಟ್, ಅಂಕಪಟ್ಟಿಗೆ ಸೀಮಿತ ಎಂದು ಪರಿಗಣಿಸಬಾರದು ಇವು ಉದ್ಯೋಗಾವಕಾಶಕ್ಕಾಗಿ ಮಾತ್ರ ಸೀಮಿತವಾಗಿರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಕೌಶಲ್ಯ ಕ್ರಿಯಾಶೀಲತೆಯನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದರು.

ಉಪನ್ಯಾಸಕ ಎಚ್.ಎಂ. ವಿವೇಕ್ ಮತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಇ.ಎಂ. ದಯಾನಂದ್ ಮಾತನಾಡಿದರು. ಉಪನ್ಯಾಸಕರಾದ ಮೋಹನ್, ಸುರೇಂದ್ರ, ಪೊನ್ನಪ್ಪ, ಶೋಭ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳು ಅನಿಸಿಕೆ ಹಂಚಿಕೊAಡರು. ಕಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.