ಸೋಮವಾರಪೇಟೆ, ಸೆ. ೧೧: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಮಡಿಕೇರಿಯ ರಕ್ತನಿಧಿ ಕೇಂದ್ರ, ಸೋಮವಾರಪೇಟೆ ರೋಟರಿ ಕ್ಲಬ್, ತಾಲೂಕು ಸಾರ್ವಜನಿಕ ಆಸ್ಪತ್ರೆ, ಪಟ್ಟಣ ಪಂಚಾಯಿತಿ, ತಾಲೂಕು ರಕ್ಷಣಾ ವೇದಿಕೆ, ಆಟೋ ಚಾಲಕರು ಮತ್ತು ಮಾಲೀಕರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಶಿಬಿರವನ್ನು ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯರಾದ ಕರುಂಬಯ್ಯ ಉದ್ಘಾಟಿಸಿದರು. ನಂತರ ಮಾತನಾಡಿ, ಇತ್ತೀಚೆಗೆ ಜಿಲ್ಲೆಯಲ್ಲಿ ಕಾಡುತ್ತಿರುವ ರಕ್ತದ ಕೊರತೆಯನ್ನು ನೀಗಿಸಲು ಸಂಘ-ಸAಸ್ಥೆಗಳು ಮುಂದಾಗಿರುವುದು ಶ್ಲಾಘನೀಯ. ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಜನರು ಮುಂದಾಗಬೇಕು. ಕೊರೊನಾ ನಂತರ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರಂತೆಯೇ ರಕ್ತದ ಬೇಡಿಕೆಯೂ ಹೆಚ್ಚಾಗುತ್ತಿದೆ. ಸಂಘ ಸಂಸ್ಥೆಗಳು ಮಾಸಿಕ ೭ ರಿಂದ ೮ ಶಿಬಿರಗಳನ್ನು ಮಾಡಿದಲ್ಲಿ ರಕ್ತದ ಕೊರತೆಯನ್ನು ನೀಗಬಹುದೆಂದರು.

ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಶಿವಪ್ರಸಾದ್ ಮಾತನಾಡಿ, ಪ್ರಪಂಚದಲ್ಲಿ ಮಂಗಳನ ಅಂಗಳಕ್ಕೆ ಹೋಗಿ ಬರುವಷ್ಟು ತಂತ್ರಜ್ಞಾನ ಬೆಳೆದರೂ, ಒಂದು ತೊಟ್ಟು ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಾಗಿಲ್ಲ. ಆದುದ್ದರಿಂದ ರಕ್ತದಾನಿಗಳು ಮತ್ತೊಂದು ಜೀವ ಉಳಿಸಲು ಮುಂದಾಗಬೇಕೆAದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಜಿಲ್ಲಾ ಸಮಿತಿ ಖಜಾಂಚಿ ಚಂದ್ರಶೇಖರ್ ವಹಿಸಿದ್ದರು.

ವೇದಿಕೆಯಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ಲೋಕೇಶ್, ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಗಂಗಾಧರ್, ಕರವೆ ತಾಲೂಕು ಘಟಕದ ಅಧ್ಯಕ್ಷ ಕೆ.ಎನ್. ದೀಪಕ್, ಜೇಸಿ ಸಂಸ್ಥೆಯ ಕಾರ್ಯದರ್ಶಿ ರಾಜೇಶ್, ಹಿರಿಯ ವಕೀಲ ಎಚ್.ಸಿ. ನಾಗೇಶ್ ಇದ್ದರು.