ಪೊನ್ನಂಪೇಟೆ. ಸೆ. ೧೨: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಚೆಕ್ಕೇರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಅಂತರಾಷ್ಟಿçÃಯ ಯೋಗ ಪಟು ಚೊಟ್ಟೋಳಿಯಮ್ಮಂಡ ಅಮೃತ್ ರಾಕೇಶ್ ಅವರು ವಿದ್ಯಾರ್ಥಿಗಳಿಗೆ ಉಚಿತ ಯೋಗ ತರಬೇತಿ ನೀಡಿದರು. ವಿದ್ಯಾರ್ಥಿಗಳಿಗೆ ಪ್ರಾಣಾಯಾಮ, ಸೂರ್ಯ ನಮಸ್ಕಾರ ಸೇರಿದಂತೆ ವಿವಿಧ ಬಗೆಯ ಆಸನಗಳನ್ನು ಮಾಡಿಸಲಾಯಿತು.ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ತಾ. ೨೪ ರಂದು ರಾಷ್ಟçಮಟ್ಟದಲ್ಲಿ ನಡೆಯಲಿ ರುವ ಯೋಗಥಾನ್‌ನಲ್ಲಿ ಗಿನ್ನಿಸ್ ದಾಖಲೆ ಮಾಡಲು ಜಾಗೃತಿ ಮೂಡಿಸುವ ಉದ್ದೇಶದಿಂದ ಯೋಗ ತರಬೇತಿಯನ್ನು ನೀಡಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಕಾವೇರಿ ಪದವಿ ಪೂರ್ವ ಕಾಲೇಜು, ಕಾಲ್ಸ್, ಲಯನ್ಸ್, ಕಾಪ್ಸ್, ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆಯ ಸುಮಾರು ೨೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ದ್ದರು. ಈ ಸಂದರ್ಭ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಎನ್‌ಎಸ್‌ಎಸ್ ಅಧಿಕಾರಿ ಕುಸುಮ್ ಹಾಗೂ ವಿವಿಧ ಶಾಲಾ ಕಾಲೇಜುಗಳ ಉಪನ್ಯಾಸಕರು ಹಾಗೂ ಶಿಕ್ಷಕರು ಇದ್ದರು.