ಮಡಿಕೇರಿ ಸೆ. ೧೩ : ಭಾಗಮಂಡಲ ಹೋಬಳಿಯ ಕಂದಾಯ ಪರಿವೀಕ್ಷಕರನ್ನು ಜಿಲ್ಲಾಡಳಿತ ವರ್ಗಾವಣೆ ಮಾಡಿರುವ ಹಿನ್ನೆಲೆ ತಾ. ೧೬ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈಬಿಡಲಾಗಿದೆ ಎಂದು ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಚರಣಿಯಂಡ ಸುಮನ್ ಹಾಗೂ ಬೇಂಗೂರು ಗ್ರಾ.ಪಂ. ಮಾಜಿ ಸದಸ್ಯ ಕೆ.ಪಿ. ಸಂತೋಷ್ ಕುಮಾರ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಂದಾಯ ಪರಿವೀಕ್ಷಕರ ಕರ್ತವ್ಯ ಲೋಪದ ಹಿನ್ನೆಲೆ ವರ್ಗಾವಣೆಗೆ ಆಗ್ರಹಿಸಲಾಗಿತ್ತು, ಅಲ್ಲದೆ ಗ್ರಾಮಸ್ಥರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದರೆ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ತಕ್ಷಣ ಕಂದಾಯ ಪರಿವೀಕ್ಷಕರನ್ನು ವರ್ಗಾವಣೆ ಮಾಡಿರುವುದರಿಂದ ಪ್ರತಿಭಟನೆಯನ್ನು ಕೈಬಿಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ.