ಮಡಿಕೇರಿ, ಸೆ. ೧೩: ಕನ್ನಡ ಸಾಹಿತ್ಯ ಪರಿಷತ್ತು ಸಂಪಾಜೆ ಹೋಬಳಿ ಘಟಕದ ಪದಾಧಿಕಾರಿ ಗಳನ್ನು ಆಯ್ಕೆ ಮಾಡುವ ಸಂಬAಧ ತಾ. ೧೭ರಂದು ಅಪರಾಹ್ನ ೩.೩೦ ಗಂಟೆಗೆ ಸಂಪಾಜೆ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಲಿದೆ.

ಸಂಪಾಜೆ ಹೋಬಳಿಯ ಎಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಸಭೆಯಲ್ಲಿ ಭಾಗವಹಿಸಿ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಪಾಲ್ಗೊಳ್ಳಬೇಕಾಗಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನವೀನ್ ಅಂಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.