ಸುಂಟಿಕೊಪ್ಪ, ಸೆ.೧೨: ಮಾದಾಪುರದ ಶ್ರೀ ಸಿದ್ಧಿ ಬುದ್ಧಿ ಗಣಪತಿ ದೇವಾಲಯದ ಸಮುದಾಯ ಭವನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗೌರಿ ಗಣೇಶ ವಿಗ್ರಹ ಮೂರ್ತಿಯನ್ನು ತಾ.೧೦ ರಂದು ಭವ್ಯ ವಿದ್ಯುತ್ ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಮೆರವಣಿಗೆಯಲ್ಲಿ ವಾದ್ಯಗೋಷ್ಠಿಯೊಂದಿಗೆ ಕೊಂಡೊಯ್ದು ಮಾದಾಪುರ ಹೊಳೆಯಲ್ಲಿ ವಿಸರ್ಜಿಸಲಾಯಿತು.

ಮಾದಾಪುರ ಇಗ್ಗೋಡ್ಲು ಆಶ್ರಯ ಕಾಲೋನಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗೌರಿ ಗಣೇಶ ವಿಗ್ರಹ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ದು ವಿಸರ್ಜಿಸಲಾಯಿತು.