ಮಡಿಕೇರಿ, ಸೆ. ೧೩: ನಗರದ ನಗರಸಭೆ ಕಟ್ಟಡದಲ್ಲಿ ಮಡಿಕೇರಿ ದಸರಾ ಸಮಿತಿ ಕಚೇರಿಯಲ್ಲಿ ಗಣಪತಿ ಹೋಮ ಸೇರಿ ವಿವಿಧ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಯಿತು.
ಇದೇ ಸಂದರ್ಭ ದಸರಾ ವೆಬ್‌ಸೈಟ್ ಹಾಗೂ ಲೋಗೋವನ್ನು ಬಿಡುಗಡೆಗೊಳಿಸಲಾಯಿತು.
ನಗರಸಭಾ ಅಧ್ಯಕ್ಷೆ ಹಾಗೂ ದಸರಾ ಸಮಿತಿಯ ಅಧ್ಯಕ್ಷೆಯೂ ಆಗಿರುವ ನೆರವಂಡ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷ ಕೆ.ಎಸ್. ರಮೇಶ್, ಗೌರವಧ್ಯಕ್ಷ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ನಗರಸಭಾ ಸದಸ್ಯರುಗಳಾದ ಅರುಣ್ ಶೆಟ್ಟಿ, ಚಂದ್ರು, ಶ್ವೇತಾ ಪ್ರಶಾಂತ್, ಸಬಿತಾ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಹರೀಶ್ ಬಿ.ಎಂ. ಸೇರಿದಂತೆ ವಿವಿಧ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.