ಮಡಿಕೇರಿ, ಸೆ.೧೨: ಕಳೆದ ಜುಲೈ, ಆಗಸ್ಟ್ ತಿಂಗಳಲ್ಲಿ ಉಂಟಾದ ಅತಿವೃಷ್ಟಿಗೆ ಮನೆ ಹಾನಿ ಸಂಬAಧ ಪರಿಹಾರ ವಿತರಣೆಗೆ ಬಾಕಿ ಇದ್ದಲ್ಲಿ, ಕೂಡಲೇ ಪರಿಹಾರ ಪಾವತಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಪರಿಹಾರ ಹಾಗೂ ಜಿಲ್ಲೆಯ ಪ್ರಗತಿಗೆ ಸಂಬAಧಿಸಿದAತೆ ಶುಕ್ರವಾರ ಮಾಹಿತಿ ಪಡೆದು ಅವರು ಮಾತನಾಡಿದರು. ಮನೆ ಹಾನಿಗೆ ಸಂಬAಧಿಸಿದAತೆ ಪರಿಹಾರ ನೀಡುವುದರ ಜೊತೆಗೆ ಬೆಳೆ ಹಾನಿಗೂ ಸರ್ಕಾರದ ನಿರ್ದೇಶನದಂತೆ ಪರಿಹಾರ ವಿತರಿಸಬೇಕು. ಆ ನಿಟ್ಟಿನಲ್ಲಿ ಸಮೀಕ್ಷೆ ಕೈಗೊಳ್ಳುವಂತೆ ಸೂಚಿಸಿದರು.
ಸೆಪ್ಟೆಂಬರ್ ಅಂತ್ಯದ ವೇಳೆಗೆ ಮಳೆ ಕಡಿಮೆಯಾಗುವ ಸಾಧ್ಯತೆ ಇದ್ದು, ಲೋಕೋಪಯೋಗಿ, ಪಂಚಾಯತ್ ರಾಜ್, ಪಿಎಂಜಿಎಸ್‌ವೈ ಹೀಗೆ ವಿವಿಧ ಇಲಾಖಾ ವ್ಯಾಪ್ತಿಯಲ್ಲಿ ಮಳೆ ಹಾನಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಇಂಜಿನಿಯರ್‌ಗೆ ನಿರ್ದೇಶನ ನೀಡಿದರು. ಮಳೆಯಿಂದ ಹಾನಿಯಾದ ನಗರ, ಪಟ್ಟಣ ಪ್ರದೇಶದಲ್ಲಿಯೂ ಸಹ ರಸ್ತೆಯ ಗುಂಡಿ ಮುಚ್ಚುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ಪ್ರಸಕ್ತ ಸಾಲಿನಲ್ಲಿ ಸುರಿದ ಮಳೆ, ಅತಿವೃಷ್ಟಿ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಕೈಗೊಂಡಿದ್ದ ಮುಂಜಾಗೃತಾ ಕ್ರಮಗಳು, ಪ್ರಾಕೃತಿಕ ವಿಕೋಪ ಸಂಬAಧ ದೂರು ನಿರ್ವಹಣೆ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.
ಪುನರ್ವಸತಿ ಫಲಾನುಭವಿಗಳ ಪೈಕಿ ಸ್ವಂತ ಜಾಗ ಇದ್ದಲ್ಲಿ ಮನೆ ನಿರ್ಮಿಸಿಕೊಳ್ಳಲು ಅನುದಾನ ಬಿಡುಗಡೆ ಮಾಡಲಾಗಿದ್ದು, ಅಂತವರಿಗೆ ಹಂತ ಹಂತವಾಗಿ ಕಾಮಗಾರಿಗೆ ಹಣ ಬಿಡುಗಡೆ ಮಾಡಲಾಗುತ್ತದೆ. ಸ್ವಂತ ಜಾಗದಲ್ಲಿ ೭೩ ಜನರು ಮನೆ ನಿರ್ಮಿಸಿಕೊಳ್ಳಲು ಮುಂದೆ ಬಂದಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಅವರು ಹೇಳಿದರು.
೨೦೧೮ ರಲ್ಲಿ ಸುರಿದ ಧಾರಾಕಾರ ಮಳೆಗೆ ಮನೆ ಕಳೆದುಕೊಂಡವರಿಗೆ ಹಲವು ಕಡೆಗಳಲ್ಲಿ ಮನೆ ನಿರ್ಮಿಸಿ ಹಸ್ತಾಂತರಿಸಲಾಗಿದೆ. ಕರ್ಣಂಗೇರಿಯಲ್ಲಿ ೩೫, ಮದೆನಾಡು ಬಳಿ ೮೦, ಗಾಳಿಬೀಡು ಬಳಿ ೧೪೦, ಬಿಳಿಗೇರಿ ಬಳಿ ೨೨, ಜಂಬೂರು ಬಳಿ ೩೮೩ ಮನೆ ಹಸ್ತಾಂತರ ಮಾಡಲಾಗಿದೆ. ಉಳಿದಂತೆ ಕೆ.ನಿಡುಗಣೆ ಬಳಿ ೭೬ ಮನೆಗಳ ಹಸ್ತಾಂತರಕ್ಕೆ ಬಾಕಿ ಇದೆ ಎಂದು ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರು ಮಾಹಿತಿ ನೀಡಿದರು.
ಬೆಳೆ ಹಾನಿ ಸಂಬAಧಿಸಿದAತೆ ಆನ್‌ಲೈನ್ ಮೂಲಕ ನೋಂದಣಿ ಮಾಡಲಾಗುತ್ತದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಷೇಕ್ ಅವರು ಹೇಳಿದರು. ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಅವರು ಪ್ರತೀ ಮನೆಗೂ ನಲ್ಲಿ ನೀರು ಕಲ್ಪಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿ ಸಂಬAಧ ಮಾಹಿತಿ ನೀಡಿದರು.
ಅತಿವೃಷ್ಟಿಯಿಂದಾಗಿ ಕಿಂಡಿ ಅಣೆಕಟ್ಟು ಸೇರಿದಂತೆ ಹಲವು ಕಡೆಗಳಲ್ಲಿ ಮರದ ದಿಮ್ಮಿಗಳು ಸಂಗ್ರಹವಾಗಿದ್ದು, ಇದನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಅರಣ್ಯ, ಕಂದಾಯ, ಪಂಚಾಯತ್ ರಾಜ್ ಹಾಗೂ ನೀರಾವರಿ ಇಲಾಖೆಗಳ ತಂಡ ರಚಿಸಿ ಮರದ ದಿಮ್ಮಿ ತೆರವಿಗೆ ಕ್ರಮವಹಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ ಅವರು ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನಹರಿಸಲಾಗುವುದು ಎಂದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.